ಬೆಂಗಳೂರು, ಜೂ. 19: ಅಂಬೇಡ್ಕರರ ಧ್ಯೇಯ, ಆದರ್ಶಗಳನ್ನು ಪಾಲನೆ ಮಾಡಲು ಅಂಬೇಡ್ಕರ್ ಜಯಂತಿಯನ್ನು ಆಚರಿಸದೆ, ಕೇವಲ ವೋಟ್ ಬ್ಯಾಂಕ್ ನಿರ್ಮಾಣಕ್ಕೆ ಹಾಗೂ ನಾಯಕತ್ವ ಉಳಿಸಿ ಕೊಳ್ಳಲು ಆಚರಿಸುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎ.ನಾರಾಯಣಸ್ವಾಮಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.ಮಂಗಳವಾರ ನಗರದ ಖನಿಜ ಭವನದಲ್ಲಿ ಕೆಎಸ್‌ಟಿಡಿಸಿ ಪ.ಜಾತಿ/ವರ್ಗ ನೌಕರರ ವೆಲ್‌ಫೇರ್ ಅಸೋಸಿಯೇಶನ್ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ 121ನೆ ಜನ್ಮ ದಿನಾಚ ರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ದೇಶದಲ್ಲಿ ದಲಿತರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಕೂಲಂಕುಶವಾಗಿ ಲೆಕ್ಕಪರಿಶೋಧನೆ ಮಾಡಿಸಲು ಯಾವುದೇ ರಾಜಕೀಯ ಪಕ್ಷಗಳಿಗೂ ಎದೆಗಾರಿಕೆ ಇಲ್ಲ. ಯಾವ ರಾಜಕಾರಣಿಗಳಿಗೂ ಆ ದಿಟ್ಟತನ ತೋರಿಸಲು ಇದುವರೆಗೂ ಸಾಧ್ಯವಾಗಿಲ್ಲ ಎಂದು ಸಚಿವ ನಾರಾಯಣ ಸ್ವಾಮಿ ಬೇಸರ ವ್ಯಕ್ತಪಡಿಸಿದರು.
ದೇಶದಲ್ಲಿ ಮೀಸಲಾತಿ ಎಲ್ಲಿದೆ ಎಂದು ಖಾರವಾಗಿ ಪ್ರಶ್ನಿಸಿದ ಸಚಿವರು, ದಲಿತರಿಗೆ ನೀಡಿರುವ ಮೀಸಲಾತಿ ಕೇವಲ ಸಾರ್ವಜನಿಕ ಶೌಚಾಲಯಗಳಿಗೆ ಸೀಮಿತಗೊಂಡಂತೆ ಮಾತ್ರ ಜಾರಿಯಾಗಿದೆ. ಇನ್ನೂ ಸಹ ವಿಧಾನಸೌಧದ ಮೆಟ್ಟಿಲುಗಳನ್ನು ಮುಟ್ಟಲು ಸಾಧ್ಯವಾಗಿಲ್ಲ. ಸರಕಾರದ ಕಾರ್ಯದರ್ಶಿ ಮಟ್ಟದಲ್ಲಿ ಹಾಗೂ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಎಷ್ಟರ ಪ್ರಮಾಣದಲ್ಲಿ ಮೀಸಲಾತಿ ಜಾರಿಯಾಗಿದೆ ಎಂದು ಅವರು ಆಕ್ರೋಶದಿಂದ ಪ್ರಶ್ನಿಸಿದರು.
ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿಡುವ ಹಣ ಶೇ.8ನ್ನೂ ದಾಟಿಲ್ಲ. ಕೈಗಾರಿಕೆ, ಖನಿಜದಂತಹ ಉದ್ಯಮಗಳಲ್ಲಿ ದಲಿತರಿಗೆ ಯಾವುದೇ ಪ್ರಾತಿನಿಧ್ಯ ಇಲ್ಲ. ಈ ದೇಶದ ಜಾತಿ ಪ್ರಜ್ಞೆ ಗ್ರಾಮ ಪಂಚಾಯತ್‌ನಿಂದ ಹಿಡಿದು ಸಂಸದ ಸ್ಥಾನಗಳಿಗೆ ಆಯ್ಕೆಯಾಗಿರುವ ಯಾವ ದಲಿತ ಜನಪ್ರತಿನಿಧಿಗಳನ್ನೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ. ಸಚಿವನಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ದಲಿತರ ನರಕದಂತಹ ಬದುಕನ್ನು ಕಣ್ಣಾರೆ ಕಂಡ ನನಗೆ, ಈ ವರ್ಗದ ಜನರ ಸ್ಥಿತಿಗತಿ ಗಳನ್ನು ಸುಧಾರಿಸದಿದ್ದರೆ ನಾನು ಯಾಕಾದರೂ ಮಂತ್ರಿಯಾಗಿರಬೇಕು ಎಂಬ ಭಾವನೆ ಮೂಡುತ್ತಿದೆ ಎಂದು ನಾರಾಯಣಸ್ವಾಮಿ ನೊಂದು ನುಡಿದರು.
ಅರಣ್ಯಗಳ ನಡುವೆ ಪ್ರಾಣಿಗಳಂತೆ ಬದುಕುತ್ತಿರುವ ಆದಿವಾಸಿಗಳನ್ನು ಯಾರೂ ಗುರುತಿಸುತ್ತಿಲ್ಲ. ಅವರಿಗೆ ಯಾವ ನಾಗರಿಕ ಸೌಲಭ್ಯಗಳನ್ನೂ ಒದಗಿಸಲು ಸಾಧ್ಯವಾಗಿಲ್ಲ. ಎಲ್ಲಿಯವರೆಗೆ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಪರಿವರ್ತನೆ ಸಾಧ್ಯವಿಲ್ಲವೋ ಅಲ್ಲಿವರೆಗೆ ಸಮಾಜದ ಬದಲಾವಣೆ ಅಸಾಧ್ಯ. ಈ ಹಿನ್ನೆಲೆಯಲ್ಲಿ ನಮಗೆಲ್ಲಾ ಮಾದರಿ ಯಾಗಬೇಕಿದ್ದ ಅಂಬೇಡ್ಕರ್ ಜಯಂತಿ ಕೇವಲ ನಾಯಕತ್ವ ರೂಪಿಸಲು ಮೆಟ್ಟಿಲಾಗಿ ಹಾಗೂ ಮತಯಾಚನೆಗೆ ಒಂದು ವಸ್ತುವಾಗಬಾರದಿತ್ತು ಎಂದು ಅವರು ನೋವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ವಿಚಾರವಾದಿ ಪ್ರೊ.ಜಿ.ಕೆ. ಗೋವಿಂದರಾವ್, ಸಮಾಜದಲ್ಲಿ ಮಠಧರ್ಮಕಾರಣದಿಂದ ಜಾತಿ, ಮತ, ಧರ್ಮಗಳ ಮೂಲಕ ಬಹುಜನರನ್ನು ಹಿಡಿದಿಟ್ಟುಕೊಳ್ಳುವ ಹುನ್ನಾರ ನಡೆಯುತ್ತಿದೆ. ಒಂದು ವೇಳೆ ನಾನೇನಾದರೂ ಮುಖ್ಯಮಂತ್ರಿಯಾದರೆ ಮಠಧರ್ಮವನ್ನು ನಿರ್ಮೂ ಲನೆ ಮಾಡುತ್ತೇನೆ ಎಂದು ಆಕ್ರೋಶದಿಂದ ನುಡಿದರು.
ಕಾವಿ ತೊಟ್ಟವರು ಇಂದು ಸಮಾಜಕ್ಕೆ ಅಪಾಯಕಾರಿಗಳಾಗಿ ಪರಿಣಮಿಸುತ್ತಿದ್ದಾರೆ. ಓಟಿನ ರಾಜಕಾರಣಕ್ಕಾಗಿ ಯಾವ ರಾಜಕಾರಣಿಯೂ ಮಠಧರ್ಮವನ್ನು ವಿರೋಧಿಸುತ್ತಿಲ್ಲ. ಮಠಾಧಿಪತಿಗಳು ಸರಕಾರವನ್ನು ನಿಯಂತ್ರಿಸುತ್ತಿದ್ದು, ಇದನ್ನೆಲ್ಲಾ ನಾವು ಸಹಿಸಿಕೊಳ್ಳುತ್ತಿರುವುದು ಗಾಂಧಿ, ಅಂಬೇಡ್ಕರ್‌ರಿಗೆ ಮಾಡಿದ ಅಪಮಾನವೇ ಆಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಅಂಬೇಡ್ಕರರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ, ಕೇಂದ್ರ ಹಾಗೂ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿ ಸಾವಿರಾರು ಬ್ಯಾಕ್‌ಲಾಗ್ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಶೀಘ್ರವಾಗಿ ತುಂಬಲು ಕ್ರಮ ಕೈಗೊಳ್ಳಬೇಕು. ದಲಿತ ವರ್ಗಗಳ ನೌಕರರಿಗೆ ಬಡ್ತಿಯಲ್ಲಿ ಯಾವುದೇ ತಾರತಮ್ಯ ಮಾಡದೆ ಸರಕಾರದ ಅತ್ಯಂತ ಪ್ರಮುಖ ನಿರ್ಧಾ ರಗಳನ್ನು ಕೈಗೊಳ್ಳುವ ಸ್ಥಾನಗಳಿಗೆ ದಲಿತರನ್ನು ನೇಮಿಸಿ ದಾಗ ಮಾತ್ರ ಮೀಸಲಾತಿಗೆ ಅರ್ಥ ಬರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿ.ಲತಾಕೃಷ್ಣರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಡಾ.ಎಲ್.ಹನುಮಂತಯ್ಯ, ಕೆಎಸ್ ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಡಿ. ದ್ಯಾವಯ್ಯ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜಿ.ಸತ್ಯವತಿ, ಕೆಎಸ್‌ಟಿಡಿಸಿ ಎಂಪ್ಲಾಯೀಸ್ ಯೂನಿಯನ್ ಗೌರವಾಧ್ಯಕ್ಷ ವೇಣುಗೋಪಾಲ್ ಉಪಸ್ಥಿತರಿದ್ದರು.
ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...
Click here to post your views ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...
ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...