
ಕಾಸರಗೋಡು:ತುಳುನಾಡಿನ ಹಲಸಿನ ಹಣ್ಣಿನಿಂದ ವಿವಿಧ ಬಗೆಯ ಖಾದ್ಯ ತಯಾರಿಸುವ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮೊಗ್ರಲ್ ಪುತ್ತೂರು ಹಯರ್ ಸೆಕೆಂಡರಿ ಶಾಲೆಯಲ್ಲಿ ಮೂರು ದಿನಗಳ ಕಾಲ ಹಲಸು ಮಹೋತ್ಸವ ಆಯೋಜಿಸಲಾಗಿದೆ.ಹಲಸಿನ ಹಣ್ಣಿನ ಪಾಯಸ, ಹಪ್ಪಳ, ಚಿಪ್ಸ್, ಉಪ್ಪಿನಕಾಯಿ, ಕೊಟ್ಟಿಗೆ ಮೊದಲಾದ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ.ಅಲ್ಲದೆ ಬೇರೆ ಬೇರೆ ಗಾತ್ರದ ಹಲಸಿನಕಾಯಿ, ಹಣ್ಣುಗಳನ್ನು ಪ್ರದರ್ಶಿಸಲಾಗುತ್ತಿದ್ದು, ಹಲಸಿನ ಬಗ್ಗೆ ಸಮಗ್ರ ಪರಿಚಯ ನೀಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯ ಕ್ರಮದಂಗವಾಗಿ 400 ಹಲಸಿನ ಹಣ್ಣುಗಳನ್ನು ಬಳಸಿ ಶಾಲೆಯಲ್ಲಿ ಬಗೆಬಗೆಯ ರುಚಿಯಾದ ಖಾದ್ಯಗಳನ್ನು ತಯಾರಿಸಿ ಬಡಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.ಇದಲ್ಲದೆ ಮೊಗ್ರಾಲ್‌ಪುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿ ಮನೆಗಳಲ್ಲೂ ಹಲಸಿನ ಸಸಿಗಳನ್ನು ನೆಟ್ಟು ಬೆಳೆಸುವ ಗುರಿಯನ್ನು ಹೊಂದಲಾಗಿದೆ.
ಮಹೋತ್ಸವವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ.ಪಿ.ಶ್ಯಾಮಲಾದೇವಿ ಉದ್ಘಾಟಿಸಿದರು.ಮೊಗ್ರಲ್‌ಪುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗಫೂರ್ ಚೇರಂಗೈ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಕೃಷ್ಣ ಅಗ್ಗಿತ್ತಾಯ, ಡಯಾಟ್ ಪ್ರಾಂಶುಪಾಲ ಸಿ.ಎಂ.ಬಾಲಕೃಷ್ಣನ್, ಮುಖ್ಯೋಪಾಧ್ಯಾಯ ಕೆ.ರಮೇಶ್, ಪಿ.ಎಂ.ಮುಹಮ್ಮದ್ ರಫೀಕ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪಿ.ಬಿ.ಅಬ್ದುಲ್ ರಹಿಮಾನ್, ಮುಜೀಬ್ ಕಂಬಾರ್, ಫಸಲ್, ಎಸ್.ಪಿ.ಸಲಾಹುದ್ದೀನ್, ಎಂ. ಸುರೇಂದ್ರನ್ ಉಪಸ್ಥಿತರಿದ್ದರು.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...