mail-img print-img

ಸಿರಿಯ: ಅವಳಿ ಸ್ಫೋಟಕ್ಕೆ ಕನಿಷ್ಠ 55 ಬಲಿ

ಶುಕ್ರವಾರ - ಮೇ -11-2012

ಡಮಾಸ್ಕಸ್, ಮೇ 10: ಸಿರಿಯದ ರಾಜಧಾನಿ ಡಮಾಸ್ಕಸ್‌ನಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಅವಳಿಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ 55 ಮಂದಿ ಸಾವಿಗೀಡಾಗಿದ್ದು, ಇತರ ಅನೇಕರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.  ಕಳೆದ 14 ತಿಂಗಳುಗಳ ಹಿಂದೆ ಸಿರಿಯದಲ್ಲಿ ಭುಗಿಲೆದ್ದಿರುವ ಬಂಡಾಯದ ಅವಧಿಯಲ್ಲಿ ನಡೆದಿರುವ ಅತ್ಯಂತ ಭೀಕರ ಘಟನೆ ಇದಾಗಿದೆ ಎಂದು ಬಣ್ಣಿಸಲಾಗಿದೆ.
ಸೇನೆಯ ಬೇಹುಗಾರಿಕೆ ಪಡೆ ಕಟ್ಟಡದ ಮುಂಭಾಗದಲ್ಲಿ ಮುಂಜಾನೆ 7:50ರ ಸುಮಾರಿಗೆ ಎರಡು ಬಾಂಬ್‌ಗಳು ಸ್ಫೋಟಿಸಿವೆ. ನೌಕರರು ಕಚೇರಿಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವ ಸಮಯದಲ್ಲೇ ಸ್ಫೋಟ ಸಂಭವಿಸಿರುವುದು ಹೆಚ್ಚಿನ ಸಾವುನೋವಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  ವಿಶ್ವಸಂಸ್ಥೆಯ ವೀಕ್ಷಕರ ತಂಡದ ಮುಖ್ಯಸ್ಥ ಮೇಜರ್ ಜನರಲ್ ರಾಬರ್ಟ್ ಮೂಡ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಸಿರಿಯದಲ್ಲಿ ಈ ರೀತಿಯ ಪರಿಸ್ಥಿತಿ ಬರಬಾರದಿತ್ತು ಎಂದು ಉದ್ಗರಿಸಿದ್ದಾರೆ.
ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸ್ಸಾದ್‌ರನ್ನು ಬೆಂಬಲಿಸುತ್ತಿರುವ ಸೇನಾಪಡೆಯ ಬಿಗಿ ಕಾವಲಿನ ನಡುವೆಯೂ ಬಂಡುಕೋರರು ಸೇನೆಯ ಕಣ್ಣುತಪ್ಪಿಸಿ ಇಂತಹ ಕೃತ್ಯಗಳನ್ನು ಎಸಗುತ್ತಲೇ ಇದ್ದಾರೆ ಎಂದು ವರದಿ ಹೇಳಿದೆ.
ಇಂದಿನ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಕೊಂಡಿಲ್ಲ ಎನ್ನಲಾಗಿದೆ.
ಇದಕ್ಕೂ ಮೊದಲು ಸಿರಿಯದಲ್ಲಿರುವ ವಿಶ್ವಸಂಸ್ಥೆ ಯ ವೀಕ್ಷಕರ ತಂಡದ ಬೆಂಗಾವಲು ವಾಹನವನ್ನು ಗುರಿಯಾಗಿಸಿ ಬುಧವಾರ ದಾಳಿಯೊಂದು ನಡೆದಿತ್ತು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕೊಟ್ಟಂತೆ ಮಾಡಿ ಬಡವರಿಂದ ಇನ್ನಷ್ಟು ಕಿತ್ತುಕೊಳ್ಳಬೇಡಿ

ಹೊಸ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದ ನಂತೆ. ಅಧಿಕಾರಕ್ಕೇರಿದ ಉತ್ಸಾಹದಲ್ಲಿ, ಸಿದ್ದರಾಮಯ್ಯ ಇದೇ ಹಾದಿಯಲ್ಲಿ ಸಾಗುತ್ತಿ ದ್ದಾರೆಯೇ? ಮತ ಹಾಕಿದ ಜನರನ್ನು ಖ ...


ನಿಮ್ಮ ಅನಿಸಿಕೆ

postClick here to post your views
EPAPER
access

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು

ನಾನು ಮತ್ತು ದೇವರು

 ರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...


- ಸುನೀಲ್ ರಾವ್