ಕಣಿಪುರ ಕ್ಷೇತ್ರ ರಕ್ಷಣೆಗಾಗಿ ಡಿಸಿ ಕಚೇರಿಗೆ ಮುತ್ತಿಗೆ
mail-img print-img

ಕಣಿಪುರ ಕ್ಷೇತ್ರ ರಕ್ಷಣೆಗಾಗಿ ಡಿಸಿ ಕಚೇರಿಗೆ ಮುತ್ತಿಗೆ

ಬುಧವಾರ - ಜನವರಿ -25-2012

ಕಾಸರಗೋಡು, ಜ.24: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಗಾಗಿ ಕುಂಬಳೆಯ ಕಣಿಪುರ ಶ್ರೀ ಗೋಪಾಲ ಕೃಷ್ಣ ದೇವಳವನ್ನು ಕೆಡಹುವ ಪ್ರಸ್ತಾಪ ವನ್ನು ವಿರೋಧಿಸಿ ಕ್ಷೇತ್ರ ಸಂರಕ್ಷಣಾ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಸಾರ್ವ ಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿದರು. ಪ್ರತಿಭಟನೆಯಲ್ಲಿ ನೂರಾರು ಮುಸ್ಲಿಮ್ ಮತ್ತು ಕ್ರೈಸ್ತರು ಭಾಗವಹಿಸಿದ್ದರು.

ಅಣಂಗೂರು ಶ್ರೀ ಶಾರದಾ ಭಜನಾ ಮಂದಿರದ ಬಳಿಯಿಂದ ಹೊರಟ ಮೆರವಣಿಗೆಯನ್ನು ಉಡುಪಿ ಕಾಣಿ ಯೂರು ಮಠಾಧೀಶ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು.

ಕ್ಷೇತ್ರ ಸಂರಕ್ಷಣಾ ಕ್ರಿಯಾ ಸಮಿತಿಯ ಅಧ್ಯಕ್ಷ ಬಿ. ಸುಬ್ಬಯ್ಯ ರೈ ಮತ್ತು ಪ್ರಧಾನ ಕಾರ್ಯದರ್ಶಿ ಕುಂಬಳೆ ಶಂನಾಡಿಗರಿಗೆ ಕಾಣಿಯೂರು ಸ್ವಾಮೀಜಿ ಭಗವಾಧ್ವಜವನ್ನು ಹಸ್ತಾಂ ತರಿಸಿ ಮೆರವಣಿಗೆಗೆ ಚಾಲನೆ ನೀಡಿ ದರು. ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಒಡಿ ಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಕೊಂಡೆವೂರು ಶ್ರೀ ಯೋಗಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಶಾಸಕ ಪಿ.ಬಿ. ಅಬ್ದುರ್ರಝಾಕ್, ತಂತ್ರಿಗಳಾದ ದೇಲಂಪಾಡಿ ಬಾಲಕೃಷ್ಣ ತಂತ್ರಿ, ಉಳಿಯತ್ತಾಯ ವಿಷ್ಣು ಅಸ್ರ, ಕುಂಟಾರು ರವೀಶ ತಂತ್ರಿ, ಕಜಂಪಾಡಿ ಸುಬ್ರಹ್ಮಣ್ಯ ಭಟ್, ಬೇಳ ಇಗರ್ಜಿಯ ಧರ್ಮಗುರು ವಿನ್ಸೆಂಟ್ ಡಿಸೋಜ, ಕುಂಬಳೆ ಇಗರ್ಜಿಯ ಧರ್ಮಗುರು ಮಾರ್ಷೆಲ್ ಸಲ್ದಾನ, ಕುಂಬಳೆ ಜಮಾಅತ್ ಸಮಿತಿಯ ಪದಾಧಿಕಾರಿಗಳಾದ ಅಬ್ದುರ್ರಹ್ಮಾನ್, ಕೆ.ಎಂ.ಸಾಲಿಹ್, ಅಂದುಞಿ, ಸಾಯಿರಾಂ ಗೋಪಾಲಕೃಷ್ಣ ಶೆಟ್ಟಿ, ಅಡೂರು ಉಮೇಶ್ ನಾಯ್ಕಿ, ಕುಂಬಳೆ ಅನಂತ ಪೈ, ಮಂಜುನಾಥ ಆಳ್ವ, ರಾಮಚಂದ್ರ ಗಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ಬಳಿಕ ಕಣಿಪುರ ಕ್ಷೇತ್ರವನ್ನು ಉಳಿಸುವ ನಿಟ್ಟಿನಲ್ಲಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ ವಿವಿಧ ಕ್ಷೇತ್ರಗಳ, ಮಂದಿರಗಳ, ಮಠಗಳ, ಇಗರ್ಜಿ, ಮಸೀದಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು. 2 ಗಂಟೆಗೂ ಅಧಿಕ ಕಾಲ ಹೆದ್ದಾರಿ ಸಂಚಾರಕ್ಕೂ ಪ್ರತಿಭಟನಾ ಮೆರವಣಿಗೆ ಯಿಂದ ಅಡಚಣೆ ಉಂಟಾಯಿತು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್