ಕಾಸರಗೋಡು, ಎ.10: ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಜನರ ದೂರುಗಳನ್ನು ಆಲಿಸದೆ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗು ವುದು ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ಪಿ.ಜೆ.ಜೋಸೆಫ್ ಹೇಳಿದ್ದಾರೆ.
ಸೀತಾಂಗೋಳಿಯಲ್ಲಿ ಜಲನಿಧಿ ಕುಡಿಯುವ ನೀರಿನ ಯೋಜನೆಯ ಎರಡನೆ ಹಂತದ ಉದ್ಘಾಟನೆಗೆ ಆಗಮಿಸಿದ್ದ ಸಚಿವರು ಇಂದು ಬೆಳಗ್ಗೆ ನಗರದ ಸರಕಾರಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರು ಸಂಬಂಧಪಟ್ಟ ಕಚೇರಿಗೆ ದೂರು ಸಲ್ಲಿಸಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಶಾಸಕರನ್ನು ಭೇಟಿಯಾಗುವಂತೆ ಹೇಳುತ್ತಿದ್ದಾರೆ ಎಂದು ಶಾಸಕ ಎನ್.ಎ. ನೆಲ್ಲಿಕುನ್ನು ಸಚಿವರ ಗಮನಕ್ಕೆ ತಂದಾಗ ಅವರು ಈ ಪ್ರತಿಕ್ರಿಯೆ ನೀಡಿದರು.
ನಗರ ಸಭೆ ಹಾಗೂ ಸುತ್ತಮುತ್ತಲ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿನ ಎರಡು ವರ್ಷಗಳೊಳಗೆ ಪರಿಹರಿಸ ಲಾಗುವುದು. ಬಾವಿಕೆರೆ ನೀರಿನ ಯೋಜನೆ ಪೂರ್ಣಗೊಂಡಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಾಗಲಿದೆ. 2 ವರ್ಷಗಳೊಳಗೆ ಈ ಯೋಜನೆ ಯನ್ನು ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ನುಡಿದರು.
ಈ ವೇಳೆ ಸಚಿವರೊಂದಿಗೆ ಶಾಸಕರಾದ ಪಿ.ಬಿ. ಅಬ್ದುರ್ರಝಾಕ್, ಎನ್.ಎ. ನೆಲ್ಲಿಕುನ್ನು, ಸಿಡ್ಕೊ ಅಧ್ಯಕ್ಷ ಸಿ.ಟಿ.ಅಹ್ಮದಾಲಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಮಳೆ ಚುರುಕುಗೊಳ್ಳುತ್ತಿದೆ. ಈ ಸಾಲಿನಲ್ಲಿ ಮಳೆ ನಿರೀಕ್ಷೆಯಷ್ಟು ಬರದೆ ಇದ್ದರೂ, ಮುಂದಿನ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ರಾಜ್ಯಾದ್ಯ ...
Click here to post your views ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...