mail-img print-img

ಗೆಳೆಯನ ಕೊಲೆ :ಮೂರು ತಿಂಗಳ ಬಳಿಕ ಆರೋಪಿಯ ಬಂಧನ

ಗುರುವಾರ - ಏಪ್ರಿಲ್ -19-2012

ಮೈಸೂರು, ಎ.18: ಹುಣಸೂರಿನಲ್ಲಿ ತಮಿಳುನಾಡು ಮೂಲದ ವ್ಯಾಪಾರಿ ತಾಜುದ್ದೀನ್ ಎಂಬರನ್ನು ಹತ್ಯೆಗೈದು ಆತನ ದ್ವಿಚಕ್ರ ವಾಹನವನ್ನು ಅಪಹರಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹುಣಸೂರಿನ ಲಾಲಾಬಂದ್ ಬೀದಿಯ ನಿವಾಸಿ ಶಿವು ಎಂದು ಗುರುತಿಸಲಾಗಿದ್ದು ಮತ್ತೋರ್ವ ಆರೋಪಿ ಸುರೇಶ್ ತಲೆಮರೆಸಿಕೊಂಡಿದ್ದಾರೆ.

ಈ ಇಬ್ಬರು ಕಳೆದ ಜನವರಿ 26ರಂದು ರಾತ್ರಿ 9:30ರಲ್ಲಿ ಹುಣಸೂರಿನ ಕಂಚಿನಕೆರೆ ಹೊಸಕೋಟೆ ರಸ್ತೆಯ ಡಿ.ಎಲ್.ಬಾರ್ ಹಿಂಭಾಗ ತಾಜುದ್ದೀನ್‌ರನ್ನು ಕರೆಸಿ ಆತನ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಬಳಿಕ ಶವವನ್ನು ಸುಟ್ಟು, ದ್ವಿಚಕ್ರ ವಾಹನವನ್ನು ಅಪಹರಿಸಿದ್ದರು. ನಂತರ ಅಪಹರಿಸಿದ ಬೈಕಿಗೆ ನಕಲಿ ನಂಬರ್ ಹಾಕಿಕೊಂಡು ಓಡಾಡುತ್ತಿದ್ದರು. ಈ ಬೈಕನ್ನು ಮಾರಲು ಶಿವು ಯತ್ನಿಸುತಿದ್ದಾಗ ಅನೇಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಕಾರ್ಯಾಚರಣೆಗೆ ಮುಂದಾದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ ಆಟೋರಿಕ್ಷಾ ಮತ್ತು ಅಪಹರಿಸಿದ್ದ ಬೈಕನ್ನು ವಶಕ್ಕೆ ಪಡೆದಿದ್ದಾರೆ.

ಸಿಪಿಐ ಗಜೇಂದ್ರ ಪ್ರಸಾದ್‌ರ ತನಿಖಾ ತಂಡದಲ್ಲಿ ಇನ್ಸ್‌ಪೆಕ್ಟರ್ ಆರ್.ಪಿ. ಅಶೋಕ್, ಪಿ.ಎಸ್.ಐ. ಹರಿವರ್ಧನ್, ಜೀವನ್, ಸಿಬ್ಬಂದಿ ಸುರೇಶ್, ಸದಾಶಿವ, ವಸಂತಕುಮಾರ್, ಪ್ರಭಾಕರ್, ಮಹೇಶ, ರಾಜು, ಮನೋಹರ, ಮಂಜುನಾಥ್, ವಸಂತ್ ಕುಮಾರ್ ರವರು ಕಾರ್ಯ ನಿರ್ವಹಿಸಿದ್ದರು. ಪತ್ತೆ ಕಾರ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಪೊಲೀಸ್ ಅಧೀಕ್ಷಕರು ಸೂಕ್ತ ಬಹುಮಾನ ಘೋಷಿಸಿದ್ದಾರೆ. ಹಾಗೂ ತಲೆ ಮರೆಸಿಕೊಂಡಿರುವ ಆರೋಪಿ ಸುರೇಶ್‌ನ ಪತ್ತೆಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಸೂಕ್ತ ಬಹುಮಾನ ನೀಡಲಾಗುವುದೆಂದು ತಿಳಿಸಿರುತ್ತಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಜನಸಂಖ್ಯೆ ಹೆಚ್ಚಳದ ಪರಿಣಾಮ

ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...


ನಿಮ್ಮ ಅನಿಸಿಕೆ

postClick here to post your views
EPAPER
access

ಮನೋಲ್ಲಾಸದ ನಾಲೆಗಳು: (ಭಾಗ-2)

ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...


- ಶೂದ್ರ ಶ್ರೀನಿವಾಸ್

ಸರ್ವೋದಯ ಸಮಾಜದ ಕನಸು: ಭಾಗ-2

ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...


- ಡಾ.ಮೊಗಳ್ಳಿ ಗಣೇಶ್

ಸರ್ವೋದಯ ಸಮಾಜದ ಕನಸು:ಭಾಗ-1

ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...


- ಡಾ.ಮೊಗಳ್ಳಿ ಗಣೇಶ್

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್