ಮಂಡ್ಯ, ಮೇ 10: ಮೈಸೂರು ವ್ಯಾಪ್ತಿಯ ಮೈಸೂರು, ಮಂಡ್ಯ, ಚಾಮರಾಜನಗರ, ಮಡಿಕೇರಿ, ಹಾಸನ ಜಿಲ್ಲೆಗಳ ಮೀಸಲು ಅರಣ್ಯದಲ್ಲಿ ನಡೆಯುತ್ತಿರುವ ಅಕ್ರಮ ರೆಸಾರ್ಟ್ ಮತ್ತು ಜಂಗಲ್ ಲಾಡ್ಜ್‌ಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಸಿಇಸಿ ನೊಟೀಸ್ ಜಾರಿ ಮಾಡಿದೆ.
ಕಾವೇರಿ ನದಿಪಾತ್ರವಾದ ಮುತ್ತತ್ತಿ ಕಾಡು ಸೇರಿದಂತೆ ಹಲವೆಡೆ ನಡೆಯುತ್ತಿರುವ ರೆಸಾರ್ಟ್ ಹಾಗೂ ಜಂಗಲ್ ಲಾಡ್ಜ್‌ಗಳಿಂದ ಆನೆ ಸೇರಿದಂತೆ ಕಾಡು ಪ್ರಾಣಿಗಳು ನಾಡು ಪ್ರವೇಶಿಸಿ, ಬೆಳೆಗಳಿಗೆ ಹಾನಿಮಾಡುತ್ತಿವೆೆ ಎಂದು ಮಂಡ್ಯದ ಆರ್‌ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ಸುಪ್ರೀಂಕೋರ್ಟ್‌ಗೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ತನಿಖೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯವು ಇತ್ತೀಚೆಗೆ ಸಿಇಸಿ ತನಿಖೆಗೆ ಆದೇಶ ಮಾಡಿತ್ತು. ಸಿಇಸಿ ರಾಜ್ಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನೊಟೀಸ್ ಜಾರಿ ಮಾಡಿ ವರದಿ ನೀಡುವಂತೆ ಆದೇಶ ನೀಡಿದ್ದು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಮತ್ತು ಪರಿಸರ ವಿಜ್ಞಾನ ಮುಖ್ಯ ಕಾರ್ಯದರ್ಶಿ, ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್‌ನ ವ್ಯವಸ್ಥಾಪಕ ನಿರ್ದೇಶಕರಿಂದಲೂ ವಿವರ ಕೇಳಿದೆ.
ಸರಕಾರದ ಅಧೀನ ಸಂಸ್ಥೆಯಾದ ಕರ್ನಾಟಕ ಜಂಗಲ್ ಲಾಡ್ಜ್ ಕಾರ್ಪೋರೇಷನ್ ವತಿಯಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಧನಗೂರು ಮೀಸಲು ಅರಣ್ಯ ಪ್ರದೇಶದಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶ ಉಲ್ಲಂಘಿಸಿ ದೊಡ್ಡಮಾಕಳ್ಳಿ ಫಿಷಿಂಗ್ ಕ್ಯಾಂಪ್, ಭೀಮೇಶ್ವರಿ ಪಿಷಿಂಗ್ ಕ್ಯಾಂಪ್‌ಗಳು ನಡೆಯುತ್ತಿವೆ. ಆನೆಗಳು ಹೆಚ್ಚಾಗಿ ಅಡ್ಡಾಡುವ ಪರಿಣಾಮ 1908ರಲ್ಲಿ ದೊಡ್ಡಮಾಕಳ್ಳಿ ಗ್ರಾಮವನ್ನು ಸ್ಥಳಾಂತರ ಮಾಡಲಾಗಿತ್ತು. ಆದರೆ, ಆನೆಗಳಿಗೆ ಅಡ್ಡಿಯಾಗದಿರಲಿ ಎಂಬ ಕಾರಣದಿಂದ ತೆರವಾದ ಆ ಸ್ಥಳದಲ್ಲೇ ಅರಣ್ಯ ಇಲಾಖೆ ಅನುಮತಿಯಿಲ್ಲದೆ ಜಂಗಲ್ ಲಾಡ್ಜ್ ಕಾರ್ಪೋರೇಷನ್ ಫಿಶಿಂಗ್ ಕ್ಯಾಂಪ್ ಆರಂಭಿಸಿತು ಎಂದು ಅರ್ಜಿದಾರ ರವೀಂದ್ರ ಪ್ರಸ್ತಾಪಿಸಿದ್ದರು.
ಅಕ್ರಮ ರೆಸಾರ್ಟ್‌ಗಳಿಂದಾಗಿ ಆನೆಗಳು ಅರಣ್ಯ ಪ್ರದೇಶದ ಗ್ರಾಮಗಳಿಗೆ ನುಗ್ಗಿ ಅಪಾರ ಬೆಳೆ ಹಾನಿ ಮಾಡಿದ್ದಲ್ಲದೇ ಅನೇಕ ಮುಗ್ಧ ರೈತರನ್ನು ಬಲಿ ತೆಗೆದುಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಂದಕ ನಿರ್ಮಿಸುವ ಕೆಲಸ ಆರಂಭಿಸಲಾಯಿತು.
ಬಿ.ಪಿ.ರವಿ ನೇತೃತ್ವದ ತಂಡ ಕಂದಕ ನಿರ್ಮಾಣ ನಡೆಸುತ್ತಿದ್ದಾಗ ಫಿಶಿಂಗ್ ಕ್ಯಾಂಪ್ ದಾಖಲೆ ಪರಿಶೀಲಿಸಿತು. ಫಿಷಿಂಗ್ ಕ್ಯಾಂಪ್‌ಗೆ ಅನುಮತಿ ಇಲ್ಲದಿರುವುದು ಬೆಳಕಿಗೆ ಬಂದಿತು. ಜೊತೆಗೆ ಮೈಸೂರು ನಗರಕ್ಕೆ ಆನೆ ಪ್ರವೇಶ ಮಾಡಿದ್ದೂ ಈ ಸ್ಥಳದಿಂದಲೇ ಎಂದು ಬಿ.ಪಿ.ರವಿ ಸರಕಾರಕ್ಕೆ ವರದಿ ಸಲ್ಲಿಸಿದ್ದರು.
ಬಿ.ಪಿ.ರವಿ ಫಿಷಿಂಗ್ ಕ್ಯಾಂಪ್ ತೆರವು ಕಾರ್ಯಚರಣೆ ಮಾಡಲು ಮುಂದಾದಾಗ ಅವರನ್ನು ಸರಕಾರ ಏಕಾಏಕಿ ವರ್ಗಾವಣೆ ಮಾಡಿ ಕೈತೊಳೆದುಕೊಂಡಿತ್ತು. ಈ ಎಲ್ಲಾ ಮಾಹಿತಿ ಕಲೆ ಹಾಕಿದ ಆರ್‌ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ, ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ಹೋರಾಟ ನಿಲ್ಲದು: ಮಂಡ್ಯ, ಮೈಸೂರು, ಹಾಸನ, ಮಡಿಕೇರಿ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ರೆಸಾರ್ಟ್ ಮತ್ತು ಪ್ರಕೃತಿಗೆ ಮಾರಕವಾದ ಯೋಜನೆಗಳನ್ನು ಸ್ಥಗಿತಗೊಳಿಸಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರಿಸುವೆ ಎಂದು ಆರ್‌ಟಿಐ ಕಾರ್ಯಕರ್ತ ಆರ್.ರವೀಂದ್ರ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...