mail-img print-img

ರಾಜ್ಯದಲ್ಲಿ ಶೀಘ್ರವೇ ಚುನಾವಣೆ: ಡಾ.ಪಿಜಿಆರ್ ಸಿಂಧ್ಯಾ ಭವಿಷ್ಯ

ಮಂಗಳವಾರ - ಜುಲೈ -10-2012

ಮೈಸೂರು, ಜು. 9: ಐದು ವರ್ಷದಲ್ಲಿ ಮೂರು ಮುಖ್ಯಮಂತ್ರಿಗಳನ್ನು ಕಾಣುತ್ತಿರುವ ಕರ್ನಾಟಕ ದಲ್ಲಿ ರಾಜಕೀಯ ನೈತಿಕತೆಯ ಅಧಃಪತನದ ವಾಗಿದೆ. ಈ ಸರಕಾರವೂ ಅಧಿಕ ದಿನ ಬಾಳುವುದಿಲ್ಲ. ಅವಧಿ ಪೂರ್ವದಲ್ಲೇ ಚುನಾವಣೆ ಎದುರಾಗಲಿದೆ ಎಂದು ಜೆಡಿಎಸ್ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವ ಡಾ.ಪಿಜಿಆರ್ ಸಿಂಧ್ಯಾ ಭವಿಷ್ಯ ನುಡಿದಿದ್ದಾರೆ.

ಕಾರ್ಯಕ್ರಮ ನಿಮಿತ್ತ ನಗರಕ್ಕಾಗಮಿಸಿದ್ದ ಅವರು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಭಿನ್ನಮತ ಯಾವುದೇ ಪಕ್ಷಕ್ಕೂ ಶೋಭೆಯಲ್ಲ, ಜನತಾ ಪರಿವಾರದಿಂದ ಹಿಡಿದು ಭಾರತೀಯ ಜನತಾ ಪಕ್ಷದವರೆಗೆ ಇದು ಪೆಂಡಭೂತದಂತೆ ಆವರಿಸಿದೆ. ಶೆಟ್ಟರ್ ಸಿಎಂ ಆದರೆ ರಾಜ್ಯ ಸುಭಿಕ್ಷ ವಾಗುತ್ತದೆ ಎಂದು ಎಣಿಸುವುದೂ ತಪ್ಪಾಗುತ್ತದೆ. ಅವರಿಗೂ ಕಂಟಕ ತಪ್ಪಿದ್ದಲ್ಲ. ಹಾಗಾಗಿ ಸ್ವಲ್ಪವಾದರೂ ನೈತಿಕತೆ ಇದ್ದರೆ ವಿಧಾನಸಭೆ ವಿಸರ್ಜಿಸಿ ಹೊಸ ಜನಾದೇಶ ಪಡೆಯಲಿ ಎಂದು ರಾಜ್ಯ ಸರಕಾರಕ್ಕೆ ಸಲಹೆ ನೀಡಿದರು.

ಕುಮಾರಣ್ಣನೇ ಮುಂದಿನ ಸಿಎಂ: ಈಗಾಗಲೇ ಪಕ್ಷ ತೊರೆದಿರುವ ಜನತಾ ಪರಿವಾರದ ಎಲ್ಲಾ ಮುಖಂಡರಿಗೆ ಪಕ್ಷದ ಬಾಗಿಲು ತೆರೆದಿದೆ. ಮುಖ್ಯಮಂತ್ರಿ ಹುದ್ದೆ ಒಂದು ಹೊರತುಪಡಿಸಿ ಅವರವರ ಯೋಗ್ಯತೆಗೆ ಮತ್ತು ಜ್ಯೇಷ್ಠತೆ ಪರಿಗಣಿಸಿ ಸೂಕ್ತ ಸ್ಥಾನ-ಮಾನ ನೀಡಲಾಗುವುದು. ಕುಮಾರಸ್ವಾಮಿ ನಮ್ಮೆಲ್ಲರ ಪ್ರಶ್ನಾತೀತ ನಾಯಕ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿಎಂ. ಇದರಲ್ಲಿ ಯಾವುದೇ ತರ್ಕವಿಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ 125 ಸೀಟ್‌ಗಳನ್ನು ಗೆಲ್ಲಿಸಿ ಕೊಡಬೇಕೆಂದು ಮತದಾರರಲ್ಲಿ ಮನವಿ ಮಾಡುತ್ತಿದ್ದೇನೆ ಎಂದರು.

ಬರ ಪರಿಹಾರದಲ್ಲಿ ಜೆಡಿಎಸ್ ಮುಂದು:   ಜೆಡಿಎಸ್ ತಮ್ಮ 40 ವರ್ಷದ ಜೀವನದಲ್ಲಿ ಈ ರೀತಿಯ ಬರ ಕಂಡಿಲ್ಲ. ಇಂದಿನ ಯಾವ ರಾಜ ಕಾರಣಿಗಳೂ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಲೀ ಅಥವಾ ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಲೀ ಮಾಡುತ್ತಿಲ್ಲ. ಕೇಂದ್ರಕ್ಕೆ ರಾಜ್ಯದ ಬರ ಪರಿಸ್ಥಿತಿ ಅರಿವಿದ್ದರೂ ಅಗತ್ಯ ಮೊತ್ತ ಬಿಡುಗಡೆ ಮಾಡುತ್ತಿಲ್ಲ. ಆದ್ದರಿಂದ ಜೆಡಿಎಸ್ ಪಕ್ಷದ ವತಿಯಿಂದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ವಸ್ತುಗಳನ್ನು ನೀಡುವುದು, ಧನ ಸಹಾಯ ಮಾಡುವುದು, ಗಂಜಿ ಕೇಂದ್ರಗಳನ್ನು ತೆರೆಯುವ ಕೆಲಸ ಹಮ್ಮಿಕೊಳ್ಳಲಾಗಿದೆ ಎಂದ ಡಾ. ಸಿಂಧ್ಯಾ ರಾಜ್ಯಾದ್ಯಂತ ಜೆಡಿಎಸ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪಕ್ಷ ಅಧಿಕಾರ ಗ್ರಹಣದತ್ತ ಸಾಗುವ ಸೂಚನೆಗಳು ಲಭ್ಯವಾಗಿವೆ ಎಂದರು.

ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಯುವಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶೇ.60ರಷ್ಟು ಹೊಸಬರಿಗೆ ಹಾಗೂ ಯುವಕರಿಗೆ ಟಿಕೇಟ್ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಗೋಷ್ಠಿಯಲ್ಲಿ ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ ಮತ್ತು ಕಾರ್ಯಾಧ್ಯಕ್ಷ ಎಸ್‌ಬಿಎಂ ಮಂಜು ಉಪಸ್ಥಿತರಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಚರ್ಚ್‌ದಾಳಿ ಗೃಹ ಇಲಾಖೆಗೆ ಪಾಠವಾಗಲಿ

‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...


ನಿಮ್ಮ ಅನಿಸಿಕೆ

postClick here to post your views
EPAPER
access

ಮಾನಸಿಕ ದಾಸ್ಯಕ್ಕೆ ಬಲಿಯಾದ ‘ದ ಇಂಡಿಯನ್’

ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...


- ಬಿ.ಶ್ರೀಪಾದ ಭಟ್

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್