mail-img print-img

ರೈತರ ಬಲಿಗೊಟ್ಟು ನೀರು ಬಿಡಲಾರೆ: ಶೆಟ್ಟರ್

ಬುಧವಾರ - ಸೆಪ್ಟೆಂಬರ್ -12-2012

*ಉಭಯ ಸದನಗಳ ವಿವಿಧ ಪಕ್ಷ ನಾಯಕರ ಸಭೆ

ಬೆಂಗಳೂರು, ಸೆ.11:ರಾಜ್ಯದ ರೈತರ ಹಿತವನ್ನು ಯಾವುದೇ ಕಾರಣಕ್ಕೂ ಬಲಿಗೊಟ್ಟು, ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಭಯ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಔಪಚಾರಿಕ ಆದೇಶದ ಕುರಿತು ಚರ್ಚಿಸಲು ಕರೆಯಲಾಗಿದ್ದ ವಿಧಾನ ಮಂಡಲದ ಉಭಯ ಸದನಗಳ ವಿವಿಧ ಪಕ್ಷಗಳ ನಾಯಕರ ಸಭೆಯ ಬಳಿಕ ಅವರು ಸುದ್ದಿ ಗೋಷ್ಠಿಯಲ್ಲಿ ಈ ಭರವಸೆ ನೀಡಿದರು. ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿಯಿದ್ದು, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ರೈತರ ಹಿತವನ್ನು ಬಲಿಕೊಡುವುದಿಲ್ಲ. ಈಗಾಗಲೆ ಪ್ರತಿದಿನ ಸರಾಸರಿ 7600 ರಿಂದ 8000 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋಗುತ್ತಿದೆ. ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಸೆ.19ರಂದು ಕರೆದಿರುವ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ಅವರು ತಿಳಿಸಿದರು.

ಕಾವೇರಿ ನದಿ ಪ್ರಾಧಿಕಾರದ ಸಭೆಯ ಮುನ್ನ ಪೂರ್ವಾಭಾವಿಯಾಗಿ ಉಭಯ ಸದನಗಳ ಪ್ರತಿಪಕ್ಷಗಳ ನಾಯಕರನ್ನು ಕರೆದು ಸೆ.15ರಂದು ಮತ್ತೊಂದು ಸಭೆ ನಡೆಸಿ, ಮತ್ತಷ್ಟು ವಿಷಯಗಳ ಕುರಿತು ಚರ್ಚೆ ನಡೆಸುತ್ತೇವೆ. ಸುಪ್ರೀಂ ಕೋರ್ಟ್ ಆದೇಶ, ರಾಜ್ಯದ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಯನ್ನು ಹಾಗೂ ಕಾವೇರಿ ನದಿ ಪ್ರಾಧಿಕಾರದ ವ್ಯಾಪ್ತಿಯಲ್ಲಿನ 42 ತಾಲೂಕುಗಳನ್ನು ಸರಕಾರ ಬರಪೀಡಿತವೆಂದು ಘೋಷಿಸಿರುವುದನ್ನು ಪ್ರಧಾನಿಯ ಮುಂದಿಡುತ್ತೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ:ಕಬಿನಿ, ಹಾರಂಗಿ ಜಲಾಶಯಗಳನ್ನು ಹೊರತುಪಡಿಸಿದರೆ, ಕೆಆರ್‌ಎಸ್, ಹೇಮಾವತಿ ಸೇರಿದಂತೆ ಬಹುತೇಕ ಜಲಾಶಯಗಳು ತುಂಬಿಲ್ಲ. ರಾಜ್ಯದ 4500 ಕೆರೆಗಳ ಪೈಕಿ ಸುಮಾರು 3500 ಕೆರೆಗಳಲ್ಲಿ ಒಂದು ತೊಟ್ಟು ನೀರಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ರೈತರ ಹಿತವನ್ನು ಬಲಿಕೊಟ್ಟು ತಮಿಳುನಾಡಿಗೆ ಹೆಚ್ಚುವರಿ ನೀಡು ಬಿಡಲು ಸಾಧ್ಯವಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ 40 ಟಿಎಂಸಿ ನೀರು ಇದೆ. ಅದನ್ನು ಅವರು ಬಳಸಿಕೊಳ್ಳಲಿ. ಸೆ.15ರಂದು ಮುಖ್ಯಮಂತ್ರಿ ಮತ್ತೊಂದು ಸಭೆಯನ್ನು ಕರೆದಿದ್ದು, ಮತ್ತಷ್ಟು ವಿಷಯಗಳ ಕುರಿತು ಚರ್ಚೆ ನಡೆಸಿ ರಾಜ್ಯದ ನಿಲುವನ್ನು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ಸ್ಪಷ್ಟಪಡಿಸಲಿದ್ದೇವೆ ಎಂದು ಅವರು ತಿಳಿಸಿದರು.

ಎಚ್.ಡಿ.ರೇವಣ್ಣ:ತಮಿಳುನಾಡಿನಲ್ಲಿ ಸೆಪ್ಟಂಬರ್-ಅಕ್ಟೋಬರ್‌ನಲ್ಲಿ ಮಳೆಯಾಗುತ್ತದೆ. ಆದರೆ, ನಮ್ಮಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಕೇಂದ್ರ ಕೃಷಿ ಸಚಿವರೇ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಲೆದೋರಲಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುವುದು ಸಾಧ್ಯವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಪ್ರಶ್ನಿಸಿದರು.ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು, ಸಂಸದರು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪ್ರಧಾನಿಗೆ ಮನವರಿಕೆ ಮಾಡಿಕೊಡಬೇಕು.

ಅಲ್ಲದೆ, ಸರಕಾರವು ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ಸ್ಪಷ್ಟವಾಗಿ ತನ್ನ ನಿಲುವನ್ನು ತಿಳಿಸಬೇಕು. ರಾಜ್ಯದ ಹಿತಾಸಕ್ತಿಗಾಗಿ ಪಕ್ಷ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು.ಸಭೆಯಲ್ಲಿ ಉಪ ಮುಖ್ಯಮಂತ್ರಿ ಆರ್. ಅಶೋಕ್,ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಟಿ.ಬಿ.ಜಯಚಂದ್ರ, ಶಾಸಕ ಶಿವಲಿಂಗೇಗೌಡ, ನ್ಯಾಯವಾದಿ ಮೋಹನ್ ಕಾತರಕಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮುಂಗಾರಿನ ಆಗಮನ:ಸರಕಾರ ಜೋಪಾನ

ರಾಜ್ಯಾದ್ಯಂತ ಮಳೆ ಚುರುಕುಗೊಳ್ಳುತ್ತಿದೆ. ಈ ಸಾಲಿನಲ್ಲಿ ಮಳೆ ನಿರೀಕ್ಷೆಯಷ್ಟು ಬರದೆ ಇದ್ದರೂ, ಮುಂದಿನ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ರಾಜ್ಯಾದ್ಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ಸರ್ವೋದಯ ಸಮಾಜದ ಕನಸು:ಭಾಗ-1

ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...


- ಡಾ.ಮೊಗಳ್ಳಿ ಗಣೇಶ್

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು