
ಹಾವೇರಿ, ಸೆ.18: ಬಿಜೆಪಿ ಪಕ್ಷವನ್ನು ಸಂಘಟಿಸಲು ಈಶ್ವರಪ್ಪ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆಗ ಮಾತ್ರ ಅವರಿಂದ ರಾಜ್ಯಾಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಪಕ್ಷದಲ್ಲಿನ ಗೊಂದಲಗಳು ಬಗೆಹರಿಯಬೇಕಿದೆ. ಪಕ್ಷದ ಸಂಘಟನೆಗೂ ಹೆಚ್ಚು ಒತ್ತು ನೀಡಬೇಕಾಗಿದೆ. ಈಗ ಉಪಮುಖ್ಯಮಂತ್ರಿ ಹುದ್ದೆಯ ಸಹಿತ ಕಂದಾಯ ಖಾತೆಯ ನಿಭಾವಣೆಯೊಂದಿಗೆ ಪಕ್ಷವನ್ನು ಮುನ್ನಡೆಸುವುದು ಅವರಿಂದ ಸುಲಭವಲ್ಲ ಎಂದು ಹೇಳಿದರು.
ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತಷ್ಟು ಜವಾಬ್ದಾರಿ ತೆಗೆದುಕೊಂಡು ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸಬೇಕು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಯಡಿಯೂರಪ್ಪ ತಿಳಿಸಿದರು.
ಮುಂದಿನ ಚುನಾವಣೆಗಳಲ್ಲಿ ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದ ಯಡಿಯೂರಪ್ಪ, ಡೀಸೆಲ್ ಬೆಲೆ ಏರಿಕೆ, ವಿದೇಶಿ ನೇರ ಹೂಡಿಕೆ ವಿರೋಧಿಸಿ ಸೆಪ್ಟೆಂಬರ್ 20ರಂದು ನಡೆಯಲಿರುವ ಬಂದ್‌ನಲ್ಲಿ ತಾನು ಬೆಂಗಳೂರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು.
ರಾಜ್ಯಾದ್ಯಂತ ಮಳೆ ಚುರುಕುಗೊಳ್ಳುತ್ತಿದೆ. ಈ ಸಾಲಿನಲ್ಲಿ ಮಳೆ ನಿರೀಕ್ಷೆಯಷ್ಟು ಬರದೆ ಇದ್ದರೂ, ಮುಂದಿನ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ರಾಜ್ಯಾದ್ಯ ...
Click here to post your views ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...