
*ಪ್ರತಿನಿತ್ಯ 9 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಭೆ ಸೂಚನೆ
ಬೆಂಗಳೂರು, ಸೆ.20: ಕಾವೇರಿ ನೀರು ಹಂಚಿಕೆ ಸಂಬಂಧ ಪ್ರಧಾನಮಂತ್ರಿಗಳ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಿನ್ನೆ ನಡೆದ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ತಮಿಳು ನಾಡಿಗೆ 9 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಇದು ರಾಜ್ಯಕ್ಕೆ ಹಿತಕರವಲ್ಲ ಎಂದು ಆಪಾದಿಸಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಭಾತ್ಯಾಗ ಮಾಡಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯವು ಪ್ರತಿನಿತ್ಯ 9 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ತಿಳಿಸಲಾಯಿತು. ಆದರೆ ರಾಜ್ಯದ ಸದ್ಯದ ಪರಿಸ್ಥಿತಿಯಲ್ಲಿ ಇಷ್ಟೊಂದು ಪ್ರಮಾಣದ ನೀರು ಹರಿಸಲು ಸಾಧ್ಯವಿಲ್ಲ ಎಂದು ತಿಳಿಸಿ, ಸಭಾತ್ಯಾಗ ಮಾಡಿರುವುದಾಗಿ ತಿಳಿಸಿದರು.
ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಕಾನೂನು ಹೋರಾಟ ನಡೆಸಲಾಗುವುದು. ಅಲ್ಲದೆ ಸುಪ್ರಿಂ ಕೋರ್ಟಿನ ಆಜ್ಞೆಯ ಪ್ರಕಾರ ಈ ತಿಂಗಳ 20 ರವಗೆ ಮಾತ್ರ ನೀರು ಹರಿಸಲಾಗುವುದು. ಅಲ್ಲದೆ ಈ ತಿಂಗಳ 21 ರಂದು ಸರ್ವಪಕ್ಷಗಳ ಸಭೆ ಕರೆದು ಈ ಬಗ್ಗೆ ಚರ್ಚೆ ನಡೆಸಲಾಗುವುದೆಂದು ತಿಳಿಸಿದರು.
ರಾಜ್ಯದ 142 ತಾಲೂಕುಗಳಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವುದರಿಂದ ಸದ್ಯ ತಮಿಳುನಾಡಿಗೆ ನೀರು ಬಿಡುವುದು ಅಸಾಧ್ಯ ಎಂಬ ರಾಜ್ಯದ ಸರ್ವ ಪಕ್ಷಗಳ ಸಭೆಯ ನಿರ್ಣಯವನ್ನು ಪ್ರಾಧಿಕಾರದ ಸಭೆಯಲ್ಲಿ ಮುಖ್ಯಮಂತ್ರಿ ಶೆಟ್ಟರ್ ಮನದಟ್ಟು ಮಾಡಲು ಯತ್ನಿಸಿದರು. ಆದರೆ ಪ್ರಧಾನಿ ಇದನ್ನು ತಿರಸ್ಕರಿಸಿದರು ಎನ್ನಲಾಗಿದೆ.
ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಆರ್.ಅಶೋಕ್, ಸರಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ, ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಕಾರ್ಯದರ್ಶಿ ಮತ್ತು ನೀರಾವರಿ ತಜ್ಞರು ಭಾಗವಹಿಸಿದ್ದರು.ಸುದೀರ್ಘ 9 ವರ್ಷಗಳ ನಂತರ ಪ್ರಾಧಿಕಾರದ ಸಭೆ ನಡೆಯಿತು. ಪ್ರಾಧಿಕಾರದ ಸದಸ್ಯರಾದ ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಕೇರಳದ ಪರವಾಗಿ ಆ ರಾಜ್ಯದ ನೀರಾವರಿ ಸಚಿವರು ಪಾಲ್ಗೊಂಡಿದ್ದರು.
ನೀರಿನ ಸಮಸ್ಯೆ ಕುರಿತು ಚರ್ಚಿಸಲು ಪ್ರಾಧಿಕಾರದ ಸಭೆ ನಡೆಯಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಒತ್ತಾಯಿಸಿದ ಮೇರೆಗೆ ಈ ಸಭೆ ಕರೆಯಲಾಗಿತ್ತು. 1997ರಲ್ಲಿ ರಚನೆಯಾದ ಕಾವೇರಿ ಪ್ರಾಧಿಕಾರದ ಸಭೆ ಇದೇ ಮೊದಲ ಬಾರಿಗೆ ಯುಪಿಎ ಸರಕಾರದ ಅಧಿಕಾರಾವಧಿಯಲ್ಲಿ ನಡೆಯುತ್ತಿದೆ. 2003ರ ಫೆಬ್ರವರಿಯಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ ಸಭೆ ನಡೆದಿತ್ತು. ಇದಕ್ಕೂ ಮುನ್ನ ಸುಪ್ರೀಂಕೋರ್ಟ್ ವಿಚಾರಣೆ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 10 ಸಾವಿರ ಕ್ಯೂಸೆಕ್ಸ್‌ನಷ್ಟು ನೀರು ಹರಿಬಿಡುವುದಾಗಿ ಕರ್ನಾಟಕ ಸದ್ಭಾವನೆಯ ನಿರ್ಧಾರ ಪ್ರಕಟಿಸಿತ್ತು. ಇಂದು ಸರ್ವಪಕ್ಷಗಳ ಸಭೆ
ಬೇಸಿಗೆಯ ಪ್ರಖರತೆ ಹೆಚ್ಚುತ್ತಲೇ ಇದೆ. ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹಿಂದೆಂದೂ ಕಂಡರಿಯದಷ್ಟು ಕುಸಿದಿದೆ. ಪ್ರತಿ ಸಲದಂತೆ ಜ ...
Click here to post your views ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...
ಮಾನ್ಯರೆ,
ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...
ಭಾರತ ದೇಶದ, ಜಗತ್ತಿನ ಅಗ್ರ ದಾರ್ಶನಿಕರಲ್ಲಿ ಓರ್ವರು ಶ್ರೀ ಶಂಕರಾಚಾರ್ಯರು. (ಕ್ರಿ. 8ನೆ ಶತಮಾನ) ಅವರ ದ ...
ಮಾನ್ಯರೇ, ಅಕ್ಷಯ ತೃತೀಯದಂದು ಚಿನ್ನ, ವಾಹನ ಅಥವಾ ಆಸ್ತಿಕೊಳ್ಳಲು ಶುಭ ದಿನ ಎಂದು ಯಾವುದೇ ಹ ...