ಬೆಂಗಳೂರು, ಎ.22: ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ಪೌರ ಕಾರ್ಮಿಕರಿಗೂ ಇಎಸ್‌ಐ ಮತ್ತು ಪಿಎಫ್ ಸೇವೆಯನ್ನು ಕಲ್ಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ರವಿವಾರ ನಗರದ ವರದಾಚಾರ್ ಸ್ಮಾರಕ ಸಭಾಂಗಣದಲ್ಲಿ ನಡೆದ ಗುತ್ತಿಗೆ ಪೌರಕಾರ್ಮಿಕರ ಮೊದಲ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿ
|
ಅವರು ಮಾತನಾಡಿದರು. ಎ.19ರಂದು ಪೌರ ಕಾರ್ಮಿಕರಿಗೆ ಚೆಕ್ ಮೂಲಕ ಕನಿಷ್ಠ ವೇತನವನ್ನು ನೀಡಬೇಕು ಎನ್ನುವ ಬೇಡಿಕೆಯನ್ನು ಸರಕಾರ ಈಡೇರಿಸಿದ್ದು, ಪಿಎಫ್ ಮತ್ತು ಇಎಸ್‌ಐ ಸೇವೆಯನ್ನು ಒದಗಿಸುವ ಬಗ್ಗೆ ಒಂದು ಸರಕಾರೇತರ ಸದಸ್ಯರ ಸಮಿತಿ ರಚಿಸಲಾಗುವುದು ಹಾಗೂ ಅದರ ನಿರ್ದೇಶನದ ಮೂಲಕ ಪಿಎಫ್ ಮತ್ತು ಇಎಸ್‌ಐ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ 4 ಸಾವಿರ ಪೌರ ಕಾರ್ಮಿಕ ರನ್ನು ನೇಮಕ ಮಾಡಬೇಕು ಎಂಬ ಬೇಡಿಕೆ ಸರಕಾರದ ಮುಂದಿದೆ. ಇಂದು ಗುತ್ತಿಗೆ ಪದ್ಧತಿಯಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡು ವುದಕ್ಕೆ ಸೂಚಿಸುವುದಾಗಿ ಅವರು ತಿಳಿಸಿದರು. ಪೌರ ಕಾರ್ಮಿಕರು ನಗರಗಳನ್ನು ಸ್ವಚ್ಛಗೊಳಿಸು ವುದರ ಜೊತೆಗೆ ಅಲ್ಲಿನ ಜನರ ಆರೋಗ್ಯವನ್ನು ಕಾಪಾಡುವ ವೈದ್ಯರಂತೆ ಕಾರ್ಯನಿರ್ವಹಿಸು ತ್ತಿದ್ದಾರೆ. ಹಾಗಾಗಿ ಅವರಿಗೆ ಸಮಾನ ಕೆಲಸಕ್ಕೆ ಸಮಾನ
ವೇತನ ನೀಡುವುದು ಸರಕಾರದ ಮುಖ್ಯ ಕರ್ತವ್ಯಗಳಲ್ಲೊಂದು ಎಂದು ಸುರೇಶ್ ಕುಮಾರ್ ಹೇಳಿದರು.
ಪೌರ ಕಾರ್ಮಿಕರ ವಿವಿಧ 7 ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದು, ಇಂದಿನ ಸಮಾವೇಶ ದಿಂದ ಇನ್ನಷ್ಟು ಜನಪರ ಬೇಡಿಕೆಗಳು ಬಂದರೆ ಅವುಗಳನ್ನು ಶೀಘ್ರದಲ್ಲಿ ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದರು.
ಸಿಐಟಿಯುನ ರಾಜ್ಯಾಧ್ಯಕ್ಷ ವಿಜಿಕೆ ನಾಯರ್ ಮಾತನಾಡಿ, ಪೂರ್ಣಾವಧಿ ಕೆಲಸಗಳಿಗೆ ಗುತ್ತಿಗೆ ಕಾರ್ಮಿಕರನ್ನು ಆಯ್ಕೆ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶವಿದ್ದು, ಸರಕಾರ ಅದನ್ನು ಉಲ್ಲಂಘಿಸುತ್ತಿದೆ ಎಂದು ದೂರಿದರು. ಪೌರ ಕಾರ್ಮಿಕರಿಗೆ ಸರಿಯಾಗಿ ನೀಡಬೇಕಾದ ವೇತನ ಮತ್ತು ಭತ್ತೆಗಳನ್ನು ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳು ಕಸಿದುಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ಬೇಡಿಕೆಗಳು ಈಡೇರಬೇಕಾದರೆ ದಿನ ನಿತ್ಯದ ಸ್ವಚ್ಛತಾ ಕಾರ್ಯವನ್ನು ಮೊಟಕುಗೊಳಿಸಿ ಹೋರಾಟದ ಮೂಲಕ ಪ್ರಯತ್ನಿಸಿದರೆ ಮಾತ್ರ ಸಾಧ್ಯ ಎಂದು ತಿಳಿಸಿದರು.
25 ವರ್ಷಗಳಿಂದ ಈ ಸಂಘಟನೆಯಲ್ಲಿ ನಾನು ಕಾರ್ಯನಿರ್ವಹಿಸುತ್ತಿದ್ದು, ಅಂದಿನಿಂದ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದ್ದರೂ ಇಂದಿನವರೆಗೂ ಈಡೇರಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ನಗರಗಳನ್ನು ಸ್ವಚ್ಛಗೊಳಿಸಿ ಅಲ್ಲಿನ ನಿವಾಸಿಗಳ ಆರೋಗ್ಯ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಅನಾರೋಗ್ಯದಿಂದ ಬಳಲುವಂತೆ ಮಾಡುತ್ತಿದೆ. ಆದುದರಿಂದ ಎಲ್ಲ ನಗರಗಳ ಪೌರಕಾರ್ಮಿಕರು ಒಂದೇ ವೇದಿಕೆಯಲ್ಲಿ ಸೇರಿ ಹೋರಾಟ ಮಾಡಿ ಬೇಡಿಕೆಗಳನ್ನು ಈಡೇರಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕೆ.ದೊರೈರಾಜು, ಸಿಐಟಿಯುನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಪ್ರಸನ್ನ ಕುಮಾರ್, ರಾಜ್ಯ ಕಾರ್ಯದರ್ಶಿ ಸೈಯದ್ ಮುಜೀಬ್, ಗುತ್ತಿಗೆ ಕಾರ್ಮಿಕರ ಹೋರಾಟ ಸಮಿತಿಯ ಸಂಚಾಲಕ ಕೆ.ಎನ್.ಉಮೆಶ್ ಮತ್ತಿತರರು ಉಪಸ್ಥಿತರಿದ್ದರು.
ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...
Click here to post your views ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...
ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...