
ಹೊಸದಿಲ್ಲಿ, ಮೇ 11: ‘ಗಣಿ ದೇಣಿಗೆ’ ಹಾಗೂ ಕಾನೂನು ಬಾಹಿರ ಭೂಸ್ವಾಧೀನ ಪ್ರಕಿಯೆ ಅಧಿಸೂಚನೆ ರದ್ದು ಹಗರಣ ಮತ್ತು ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಗಳ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಇಂದು ಆದೇಶಿಸಿದೆ.
‘ಗಣಿ ದೇಣಿಗೆ’ ಹಾಗೂ ಕಾನೂನು ಬಾಹಿರ ಭೂಸ್ವಾಧೀನ ಪ್ರಕಿಯೆ ಅಧಿಸೂಚನೆ ರದ್ದು ಹಗರಣ ಮತ್ತು ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಗಳ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕೆಂದು ಕೋರಿ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆಯನ್ನು ಮೇ 4ಕ್ಕೆ ಪೂರ್ಣಗೊಳಿಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಹಾಗೂ ಅಫ್ತಾಬ್ ಆಲಂ, ಸ್ವತಂತ್ರ ಕುಮಾರ್‌ರನ್ನೊಳಗೊಂಡ ತ್ರಿಸದಸ್ಯ ಅರಣ್ಯಪೀಠ, ಇಂದು ತೀರ್ಪು ಪ್ರಕಟಿಸಿತು.
|
ಸುಪ್ರೀಂ ತೀರ್ಪಿಗೆ ಸ್ವಾಗತ: ಯಡಿಯೂರಪ್ಪ ನಂಜನಗೂಡಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮೇಲಿನ ಪ್ರಕರಣಗಳ ಕುರಿತು ತನಿಖೆ ನಡೆಸುವಂತೆ ಸಿಬಿಐಗೆ ಆದೇಶ ನೀಡಿದ ಸುಪ್ರೀಂಕೋರ್ಟ್‌ನ ತೀರ್ಪನ್ನು ತಾನು ಸ್ವಾಗತಿಸುತ್ತೇನೆ. ಈ ಪ್ರಕರಣಗಳಿಂದ ತಾನು ಆರೋಪ ಮುಕ್ತವಾಗಲಿದ್ದು, ತನಗೆ ನ್ಯಾಯ ದೊರಕುವ ವಿಶ್ವಾಸವಿದೆ ಎಂದು ತಿಳಿಸಿದರು. ಸುಪ್ರೀಂಕೋರ್ಟ್ ತೀರ್ಪಿಗೂ ಮೊದಲು ಖಾಸಗಿ ಕಾರಿನಲ್ಲಿ ನಂಜನಗೂಡಿಗೆ ಆಗಮಿಸಿದ ಯಡಿಯೂರಪ್ಪ, ನಂಜನಗೂಡಿನಲ್ಲಿ ಶ್ರೀಕಂಠೇಶ್ವನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. |
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿ ಸುಪ್ರೀಂಕೋರ್ಟ್ ಆದೇಶ ನೀಡಿತು. ಈ ಪ್ರಕರಣಗಳ ತನಿಖೆಯನ್ನು ಲೋಕಾಯುಕ್ತ ನಡೆಸದಂತೆ ತಡೆ ನೀಡಿದ ಸುಪ್ರೀಂಕೋರ್ಟ್, ಈ ತನಿಖೆಯನ್ನು ಸಿಬಿಐಯ ಎಡಿಜಿಪಿಗೆ ವಹಿಸಿ ಆದೇಶಿಸಿತಲ್ಲದೇ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿತು.
ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ‘ಜಿಂದಾಲ್ ಸ್ಟೀಲ್ ವರ್ಕ್’ ಮತ್ತು ‘ಸೌತ್ ವೆಸ್ಟ್ ಮೈನಿಂಗ್ ಕಂಪೆನಿ’ಯಿಂದ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರಾದ ಬಿ.ವೈ.ರಾಘವೇಂದ್ರ, ಬಿ.ವೈ. ವಿಜಯೇಂದ್ರ ಹಾಗೂ ಸೋಹನ್ ಕುಮಾರ್ ಒಡೆತನದ ‘ಪ್ರೇರಣಾ ಶಿಕ್ಷಣ ಟ್ರಸ್ಟ್’ ಹಾಗೂ ‘ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್’ ದೇಣಿಗೆ ಪಡೆದ ಆರೋಪದ ಕುರಿತು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ಥಾಪನೆ ಆದಾಗಿನಿಂದ ಬಡಾವಣೆ ನಿರ್ಮಿಸಲು ವಶಪಡಿಸಿಕೊಂಡ ಭೂಮಿ, ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟ ಭೂಮಿ ಕುರಿತು ಹಾಗೂ ರಾಚೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಗಳ ಕುರಿತಾಗಿ ಸಿಬಿಐಯಂತಹ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಶಿಫಾರಸು ಮಾಡಿ ಸಿಇಸಿ ಎ.20ರಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...
Click here to post your views ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...
ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...