ಬೆಂಗಳೂರು, ಮೇ 12: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈಗಾಗಲೆ 9 ಸಚಿವರು ಹಾಗೂ ಹತ್ತಕ್ಕೂ ಅಧಿಕ ಶಾಸಕರು ತಮ್ಮ ನಾಯಕ ಯಡಿಯೂರಪ್ಪನವರಿಗೆ ರಾಜೀನಾಮೆ ಪತ್ರವನ್ನು ಒಪ್ಪಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪನವರು ತನ್ನ ಶಾಸಕ
ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಬಂದಿದ್ದು, ಸೋಮವಾರ ಪಕ್ಷದ ವರಿಷ್ಠರಿಗೆ ರಾಜೀನಾಮೆ ಪತ್ರವನ್ನು ನೀಡುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸದಾನಂದ ಗೌಡ ಪರ ಹಾಗೂ ವಿರೋಧಿ ಮುಖಂಡರು ದಿಲ್ಲಿಗೆ ದೌಡಾಯಿಸಿದ್ದಾರೆ.
ಈ ನಡುವೆ ಯಡಿಯೂರಪ್ಪನವರೊಂದಿಗೆ ಆರೆಸ್ಸೆಸ್ ನಡೆಸಿದ ಸಂಧಾನ ವಿಫಲಗೊಂಡಿದ್ದು, ತನ್ನ ಬೆಂಬಲಿಗರ ಮಾತೇ ನನಗೆ ಅಂತಿಮ ಎಂದು ಯಡಿಯೂರಪ್ಪ ಆರೆಸ್ಸೆಸ್ ಮುಖಂಡರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬಿಜೆಪಿಯೊಳಗಿನ ಆಂತರಿಕ ಬಿಕ್ಕಟ್ಟು ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪ ನಿವಾಸದಲ್ಲಿ ಅವರ ಆಪ್ತರು ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಅಂತಿಮವಾಗಿ ಅವರ ಆಪ್ತ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ಯಡಿಯೂರಪ್ಪರಿಗೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾದ ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಮುರುಗೇಶ್ ನಿರಾಣಿ, ಸೋಮಣ್ಣ, ಸಿ.ಎಂ.ಉದಾಸಿ, ರೇಣುಕಾಚಾರ್ಯ, ಉಮೇಶ್ ಕತ್ತಿ ಸೇರಿದಂತೆ ಮತ್ತಿತರ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಹಾಗೂ ಸಿಎಂ ಉದಾಸಿ ನಿವಾಸದಲ್ಲಿ ಹಲವು ಸುತ್ತಿನ ಸಭೆ ನಡೆಸಿರುವ ಬೆಂಬಲಿಗರು, ಮುಂದಿನ ರಾಜಕೀಯ ನಡೆಯ ಕುರಿತು ಚರ್ಚಿಸಿದ್ದು, ಕೊನೆಗೆ ರಾಜೀನಾಮೆ ಪತ್ರ ವನ್ನು ಯಡಿಯೂರಪ್ಪರಿಗೆ ನೀಡುವ ಮೂಲಕ ತಮ್ಮ ನಿಷ್ಠೆ ಪ್ರದರ್ಶಿಸಿದ್ದಾರೆ. ಹೈಕಮಾಂಡ್ ಸದಾನಂದ ಗೌಡರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸದಿದ್ದರೆ ಈ ಪತ್ರವನ್ನು ಸಾಮೂಹಿಕವಾಗಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪರಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆನ್ನಲಾಗಿದೆ.
ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...
Click here to post your views ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...
ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...