ಬೆಂಗಳೂರು, ಮೇ 13: ಈಗಾಗಲೇ 8 ಮಂದಿಯ ರಾಜೀನಾಮೆ ಪತ್ರ ತನ್ನ ಕೈ ಸೇರಿದ್ದು, ತನ್ನ ನಡೆಯ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ಸಚಿವರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರಿಗೆ ಸಚಿವ, ಶಾಸಕರ ಮೇಲೆ ನಂಬಿಕೆ ಇಲ್ಲವಾಗಿದ್ದು, ಸರ್ವಾಧಿಕಾರಣ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಸದಾನಂದ ಗೌಡರು ಶಾಸಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶಾಸಕಾಂಗ ಸಭೆ ಕರೆದಿಲ್ಲ. ಯಾರದೇ ಅಭಿಪ್ರಾಯ ಪಡೆಯದೆ ಸಚಿವರ ಬಗ್ಗೆ ವರಿಷ್ಠರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ಬೆಂಬಲಿಗರ ಸಮಸ್ಯೆಯನ್ನು ಕೇಳುವುದು ತನ್ನ ಕರ್ತವ್ಯವಾಗಿದೆ. ಈಗಾಗಲೇ ತನ್ನ ಎಂಟು ಮಂದಿ ಬೆಂಬಲಿಗರು ತನಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿಯಾದ ತನ್ನಲ್ಲಿ ಯಾರೂ ರಾಜೀನಾಮೆ ಪತ್ರ ನೀಡಿಲ್ಲ ಎಂದು ಸದಾನಂದ ಗೌಡರು ಹೇಳಿಕೆ ನೀಡಿದ್ದು, ಸದ್ಯದಲ್ಲಿಯೇ ಮುಖ್ಯಮಂತ್ರಿಯಾದ ಸದಾನಂದ ಗೌಡರಿಗೆ ತಾನು ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದೇನೆ ಎಂದು ಯಡಿಯೂರಪ್ಪ ವ್ಯಂಗ್ಯವಾಗಿ ತಿಳಿಸಿದರು.
ತನ್ನ ರಾಜೀನಾಮೆ ಬಗ್ಗೆ ತಾನು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇನೆ ಎಂದು ಅವರು ತಿಳಿಸಿದರು.
ಸಂಧಾನಕ್ಕಾಗಿ ಯಡ್ಡಿ ಮನೆಗೆ ದೌಡಾಯಿಸಿದ ಈಶ್ವರಪ್ಪ
ಮತ್ತೊಂದೆಡೆ ಡಿ.ವಿ. ಸದಾನಂದ ಗೌಡರ 'ಅನುಗ್ರಹ' ನಿವಾಸದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸಂಧಾನಕ್ಕೆಂದು ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದು, ಮುಖ್ಯಮಂತ್ರಿ ಸದಾನಂದ ಗೌಡ ವರಿಷ್ಠರನ್ನು ಭೇಟಿ ಮಾಡಲು 12:45ರ ವಿಮಾನದಲ್ಲಿ ಹೊಸದಿಲ್ಲಿಗೆ ತೆರಳಲಿದ್ದಾರೆ. ಈ ಸಂದರ್ಭ ಅನುಗ್ರಹದಿಂದ ವಿಮಾನ ನಿಲ್ದಾಣಕ್ಕೆ ತೆರಳಿದ ಸದಾನಂದ ಗೌಡರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಇತ್ತ ಸಚಿವ ಸುರೇಶ್‌ಕುಮಾರ್, ಆರೆಸ್ಸೆಸ್ ಮುಖಂಡ ಸಂತೋಷ್‌ರೊಂದಿಗೆ ಕೆ.ಎಸ್.ಈಶ್ವರಪ್ಪ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದು, ಆದರೆ, ಇದಕ್ಕೂ ಮುನ್ನವೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಯಡಿಯೂರಪ್ಪ ಮನೆಯಿಂದ ನಿರ್ಗಮಿಸಿದ್ದರು.
ನಗರದ ದೇವಸಂದ್ರದಲ್ಲಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ವೀರಶೈವ ಸಮಾವೇಶ ನಡೆಯಲಿದ್ದು, ಇದಕ್ಕೆ ಯಡಿಯೂರಪ್ಪ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಯಡಿಯೂರಪ್ಪ ನಿವಾಸದಲ್ಲಿ ಇದೀಗ ಕಾಯುವಂತಾಗಿದೆ.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಕಳಂಕಿತರನ್ನು ಸಚಿವ ಸಂಪುಟದಿಂದ ಹೊರಗಿಟ್ಟು ಭೇಷ್ ಅನಿಸಿಕೊಂಡ ಸಿದ್ದು, ಖಾತೆ ಹಂಚಿಕೆಯಲ್ಲ ...
ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...