mail-img print-img

ಅನ್ಸಾರಿ ಎರಡನೆ ಅವಧಿಗೆ: ಕಾಂಗ್ರೆಸ್ ಆಸಕ್ತಿ

ಮಂಗಳವಾರ - ಜುಲೈ -10-2012

 

ಹೊಸದಿಲ್ಲಿ, ಜು. 9: ಮುಂದಿನ ತಿಂಗಳು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಹಾಮಿದ್ ಅನ್ಸಾರಿರನ್ನು ಎರಡನೆ ಅವಧಿಗೆ ಮುಂದುವರಿಸಲು ಕಾಂಗ್ರೆಸ್ ಉತ್ಸುಕವಾಗಿದ್ದು, ಈ ಸಂಬಂಧ ಅವರಿಗೆ ಬೆಂಬಲ ಕೋರಲು ಮನಮೋಹನ್ ಸಿಂಗ್ ಮುಂದಾಗಿದ್ದಾರೆ.ಈ ಕುರಿತು ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಸಿಂಗ್ ಶನಿವಾರ ಚರ್ಚೆ ನಡೆಸಿದ್ದು, ಜೆಡಿಎಸ್ ಅನ್ಸಾರಿರವರಿಗೆ ಬೆಂಬಲ ಸೂಚಿಸಿದೆ.ಚರ್ಚೆಯ ವೇಳೆ ಹಾಮಿದ್ ಅನ್ಸಾರಿ ಅವರ ಹೆಸರು ಮಾತ್ರ ಪ್ರಸ್ತಾಪವಾಗಿದ್ದು, ಅವರಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ದೇವೇಗೌಡ ತಿಳಿಸಿದರು ಎಂದು ಜೆಡಿಎಸ್ ವಕ್ತಾರ ದಾನಿಶ್ ಅಲಿ ತಿಳಿಸಿದ್ದಾರೆ. ಅನ್ಸಾರಿರನ್ನು ಎರಡನೆ ಅವಧಿಗೆ ಮುಂದುವರಿಸುವುದು ಅಲ್ಪಸಂಖ್ಯಾತ ವರ್ಗಕ್ಕೆ ಉತ್ತಮ ಸಂದೇಶ ತಲುಪಿಸುತ್ತದೆ ಎಂದು ಕಾಂಗ್ರೆಸ್‌ನ ಒಂದು ವಲಯ ಭಾವಿಸಿ ಕೆಲ ದಿನಗಳಿಂದ ಅವರ ಹೆಸರನ್ನು ಮಾತ್ರ ತೇಲಿ ಬಿಟ್ಟಿತ್ತು.  

ಇದಕ್ಕೆ ಸೋನಿಯಾ ಕೂಡಾ ಸಮ್ಮತಿಸಿದ್ದರಿಂದ ಪ್ರಧಾನಿ ಮನಮೋಹನ್ ಸಿಂಗ್ ಇದೀಗ ರಂಗ ಪ್ರವೇಶಿಸಿದ್ದು, ಇಂದು ಸಿಪಿಎಂನ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್‌ರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.ರಾಷ್ಟ್ರಪತಿ ಚುನಾವಣೆ ಸಮಯದಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಮತ್ತು ಅಕಾಲಿ ದಳದ ಮುಖ್ಯಸ್ಥ ಹಾಗೂ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಹೆಸರು ಕೇಳಿ ಬಂದಿತ್ತು.

 

ಅಭ್ಯರ್ಥಿ ಕಣಕ್ಕೆ-ಬಿಜೆಪಿ: ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತನ್ನ ಸ್ವಂತ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಯುಪಿಎ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ ಎಂದು ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಸ್ವಾಭಾವಿಕವಾದ ರೀತಿಯಲ್ಲಿ ಹೋರಾಟ ನಡೆಸಲಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ಎನ್‌ಡಿಎ ಮೈತ್ರಿ ಪಕ್ಷಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು. ಉಪ ರಾಷ್ಟ್ರಪತಿ ಚುನಾವಣೆ ಆ.8ರಂದು ನಡೆಯಲಿದ್ದು, ಜು.20 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ.

 

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...


ನಿಮ್ಮ ಅನಿಸಿಕೆ

postClick here to post your views
EPAPER
access

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್

ರಾಜಕೀಯ ಪಕ್ಷಗಳ ಆತ್ಮವಿಮರ್ಶೆ ಅಗತ್ಯ

ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...


- ನಾ ದಿವಾಕರ್