ಬೆಂಗಳೂರು, ಜು.10: ರಾಜ್ಯ ಬಿಜೆಪಿಯಲ್ಲಿನ ಬಿಕ್ಕಟ್ಟು ಇನ್ನೂ ಮುಂದುವರಿದಿದ್ದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಬಣ ಇದೀಗ ತಮ್ಮ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸದ ಹೊರತು ಶಾಸಕಾಂಗ ಸಭೆಗೆ ಹೋಗದಿರಲು ನಿರ್ಧರಿಸಿದೆ. ಈ ಕಾರಣದಿಂದ ಮಂಗಳವಾರ 11 ಗಂಟೆಗೆ ನಡೆಯಬೇಕಾಗಿದ್ದ ಶಾಸಕಾಂಗ ಸಭೆ ಮುಂದೂಡಲ್ಪಟ್ಟಿದೆ.
ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ಇಂದು 11 ಗಂಟೆಗೆ ಶಾಸಕಾಂಗ ಸಭೆ ಆರಂಭವಾಗಬೇಕಿತ್ತು. ಈ ಸಭೆಯಲ್ಲಿ ಜಗದೀಶ್ ಶೆಟ್ಟರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ಯೋಜನೆ ರೂಪಿಸಿತ್ತು. ಕೇಂದ್ರದಿಂದ ವೀಕ್ಷಕರಾಗಿ ಬಿಜೆಪಿ ವರಿಷ್ಠರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್ ಕೂಡಾ ಆಗಮಿಸಿದ್ದರು. ಇವರಲ್ಲದೆ, ಬಿಜೆಪಿಯ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಕೂಡಾ ಇವರ ಜೊತೆಗಿದ್ದರು.
ಆದರೆ, ಈ ನಡುವೆ ರಾಜ್ಯ ಬಿಜೆಪಿ ಬಿಕ್ಕಟ್ಟು ಮತ್ತೊಂದು ತಿರುವು ಪಡೆದಿದ್ದು, ಯಡಿಯೂರಪ್ಪರ ಮನೆಯಿಂದ ಡಿ.ವಿ.ಸದಾನಂದ ಗೌಡರ ಮುಖ್ಯಮಂತ್ರಿಯ ಅಧಿಕೃತ ನಿವಾಸದವಾ ‘ಅನುಗ್ರಹ’ಕ್ಕೆ ಸ್ಥಳಾಂತರಗೊಂಡಿದೆ. ಇಲ್ಲಿ ಸಚಿವರು, ಶಾಸಕರು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಜನ ಬೀಡು ಬಿಟ್ಟಿದ್ದು, ಸಭೆ ನಡೆಸುತ್ತಿದ್ದಾರೆ ಹಾಗೂ ತಮ್ಮ ಪ್ರಮುಖ ಮೂರು ಬೇಡಿಕೆಗಳನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ. ಇದನ್ನು ಈಡೇರಿಸದ ಹೊರತು ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು 11ಗಂಟೆಗೆ ಸಭೆ ಆರಂಭವಾಗಬೇಕಿದ್ದರೂ, ಯಡಿಯೂರಪ್ಪ ಬಣದ ಸಚಿವರು, ಶಾಸಕರನ್ನು ಬಿಟ್ಟರೆ, ಸದಾನಂದ ಗೌಡರ ಬಣದ ಸಚಿವರು, ಶಾಸಕರುಗಳು ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯು ಮುಂದೂಡಲ್ಪಟ್ಟಿತ್ತು.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ಮುಂದಿನ ನಡೆಯನ್ನು ಕಾದು ನೋಡಬೇಕಿದೆ.
ಹೊಸ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದ ನಂತೆ. ಅಧಿಕಾರಕ್ಕೇರಿದ ಉತ್ಸಾಹದಲ್ಲಿ, ಸಿದ್ದರಾಮಯ್ಯ ಇದೇ ಹಾದಿಯಲ್ಲಿ ಸಾಗುತ್ತಿ ದ್ದಾರೆಯೇ? ಮತ ಹಾಕಿದ ಜನರನ್ನು ಖ ...
Click here to post your views ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...