ಬೆಂಗಳೂರು, ಜು.10: ರಾಜ್ಯ ಬಿಜೆಪಿಯ ಉಭಯ ಬಣಗಳ ಬೇಡಿಕೆಗಳಿಗೆ ಕೊನೆಗೂ ಹೈಕಮಾಂಡ್ ಮಣಿದಿದ್ದು, ರಾಜ್ಯದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸಮ್ಮತಿ ದೊರೆತಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಹೈಕಮಾಂಡ್ ಸಮ್ಮತಿ ನೀಡಿದ್ದು, ಕೆ.ಎಸ್.ಈಶ್ವರಪ್ಪ ಹಾಗೂ ಆರ್.ಅಶೋಕ್ ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಯಡಿಯೂರಪ್ಪ ಬಣ ಸೃಷ್ಠಿಸಿದ ಭಿನ್ನಮತದಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಡಿ.ವಿ.ಸದಾನಂದ ಗೌಡರನ್ನು ಪದಚ್ಯುತಿಗೊಳಿಸಲಾಗಿತ್ತು. ಇಂದು ನಗರದ ಕ್ಯಾಪಿಟಲ್ ಹೊಟೇಲ್‌ನಲ್ಲಿ ಶಾಸಕಾಂಗ ಸಭೆ ನಡೆದು, ಅಲ್ಲಿ ಜಗದೀಶ್ ಶೆಟ್ಟರನ್ನು ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆಗೊಳಿಸಬೇಕಾಗಿತ್ತು.
ಈ ನಡುವೆ ಇಂದು ಡಿ.ವಿ. ಸದಾನಂದ ಗೌಡರ ಬಣದ 50ಕ್ಕೂ ಹೆಚ್ಚು ಶಾಸಕರು ತಮ್ಮ ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟುಕೊಂಡು, ಅದನ್ನು ಈಡೇರಿಸುವಂತೆ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದರಲ್ಲದೆ, ಮಂಗಳವಾರ ಪೂರ್ವಾಹ್ನ 11ಗಂಟೆಗೆ ನಡೆಯಲಿದ್ದ ಶಾಸಕಾಂಗ ಸಭೆಯನ್ನು ಬಹಿಷ್ಕರಿಸಿದ್ದರು. ಇದರಿಂದ ಶಾಸಕಾಂಗ ಸಭೆ ಮುಂದೂಡಲ್ಪಟ್ಟಿತ್ತು.
ಆ ಬಳಿಕ ಅಶೋಕ ಹೊಟೇಲ್‌ನಲ್ಲಿ ಬಿಜೆಪಿ ವರಿಷ್ಠರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಡಿ.ವಿ.ಸದಾನಂದ ಗೌಡರ ಬಣ, ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಿಗೊಂಡ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು. ಕೆ.ಎಸ್.ಈಶ್ವರಪ್ಪರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಬೇಕು ಹಾಗೂ ಎರಡೂ ಬಣಗಳಿಗೂ ಸಮಾನ ಪ್ರಾತಿನಿಧ್ಯ ನೀಡುವ ಮೂಲಕ ಖಾಲಿ ಇರುವ ಎಲ್ಲಾ ಸಚಿವ ಸ್ಥಾನವನ್ನು ಭರ್ತಿಗೊಳಿಸಬೇಕು ಎಂಬ ಪ್ರಮುಖ ಮೂರು ಬೇಡಿಕೆಗಳನ್ನು ಇಂದೇ ಈಡೇರಿಸಬೇಕೆಂದು ಆಗ್ರಹಿಸಿತ್ತು.
ಈ ನಡುವೆ ಆರ್.ಅಶೋಕ್ ಕೂಡಾ ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದು, ಅವರೂ ತನ್ನ ನಿವಾಸದಲ್ಲಿ ಇಂದು ಬೆಂಬಲಗರೊಂದಿಗೆ ಸಭೆ ನಡೆಸಿ, ಭಿನ್ನಮತದ ಕಹಳೆ ಊದಿದ್ದರು.
ಇದೀಗ ಬಿಜೆಪಿ ವರಿಷ್ಠರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ದರ್ಮೇಂದ್ರ ಪ್ರಧಾನ್, ಉಭಯ ಬಣಗಳೊಂದಿಗೆ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಎರಡು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದಾನಂದ ಗೌಡರ ಬಣದ ಉಳಿದ ಬೇಡಿಕೆಯಾದ ಸಂಪುಟ ವಿಸ್ತರಣೆಯನ್ನು ಹೈಕಮಾಂಡ್ ಒಪ್ಪಿಗೆ ಮೇರೆಗೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಹೊಸದಿಲ್ಲಿಯ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಭರ್ತಿಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...