
ಬೆಂಗಳೂರು, ಜು.24: ಬರ ಪರಿಹಾರದಲ್ಲಿ ಸರಕಾರ ನಿರ್ಲಕ್ಷ ವಹಿಸಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೇಳಿಕೆ ಬಿಜೆಪಿಯಲ್ಲಿ ಮತ್ತೆ ಗೊಂದಲ ಮೂಡಿಸುವ ಹುನ್ನಾರ ಎಂದು ನಿಕಟಪೂರ್ವ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.ವರಿಷ್ಠರೊಂದಿಗೆ ಮಾತುಕತೆ ನಡೆಸಲು ಹೊಸದಿಲ್ಲಿಗೆ ತೆರಳಿರುವ ಅವರು, ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರಕಾರ ಯಶಸ್ವಿಯಾಗಿ ಕೆಲಸ ನಿರ್ವಹಿಸಿದೆ ಎಂದು ಪ್ರತಿಪಕ್ಷಗಳು, ಕೇಂದ್ರ ತಂಡ ಹಾಗೂ ಕೇಂದ್ರ ಸರಕಾರಗಳು ಅಭಿನಂದಿಸಿವೆ. ಇಂತಹದರಲ್ಲಿ ಯಡಿಯೂರಪ್ಪ ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಮತ್ತೆ ಪಕ್ಷದಲ್ಲಿ ಗೊಂದಲ ಸೃಷ್ಟಿಸುವ ಹುನ್ನಾರ ಎಂದು ದೂರಿದರು.ಮೂರೂವರೆ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ ಯಡಿಯೂರಪ್ಪ ಇದೀಗ ಸರಕಾರದ ವಿರುದ್ಧವೇ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಅವರ ಈ ವರ್ತನೆ ನಿಜಕ್ಕೂ ದುರದೃಷ್ಟಕರ. ಯಡಿಯೂರಪ್ಪ ವಿಧಾನಸಭೆಯಲ್ಲಿ ಉದ್ದೇಶಪೂರ್ವಕವಾಗಿಯೇ ಬರ ಪರಿಸ್ಥಿತಿ ಕುರಿತು ಪ್ರಸ್ತಾಪ ಮಾಡಿದ್ದಾರೆ. ಇದು ಕೇವಲ ರಾಜಕಾರಣಕ್ಕಾಗಿ ನೀಡಿರುವ ಹೇಳಿಕೆಯೇ ಹೊರತು ಇದರಲ್ಲಿ ವಿಶೇಷವೇನಿಲ್ಲ ಎಂದು ಸದಾನಂದ ಗೌಡ ಕಿಡಿಗಾರಿದರು.
ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಪಕ್ಷದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಪಕ್ಷದ ವರಿಷ್ಠರಿಗೂ ಮನವರಿಕೆ ಮಾಡಿಕೊಡಲಾಗುವುದು. ಪಕ್ಷದ ಶಿಸ್ತು ಉಲ್ಲಂಘಿಸಿರುವವರ ವಿರುದ್ಧ ಶಿಸ್ತಿನ ಕ್ರಮಕೈಗೊಳ್ಳುವ ಮೂಲಕ ಯಾರು ಎಷ್ಟೇ ದೊಡ್ಡವರಾದರೂ ಪಕ್ಷಕ್ಕಿಂತ ದೊಡ್ಡವರಲ್ಲ ಎಂಬುದನ್ನು ಸಾಬೀತುಪಡಿಸಬೇಕಿದೆ.
ಈ ಕುರಿತು ಪಕ್ಷದ ಹೈಕಮಾಂಡ್ ಶೀಘ್ರವೇ ಸೂಕ್ತ ತೀರ್ಮಾನ ಮಾಡಲಿದೆ ಎಂದು ಅವರು ಹೇಳಿದರು.ಮತ್ತೊಂದೆಡೆ ವಿಧಾನ ಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ, ಬರಗಾಲಕ್ಕೆ ಸಂಬಂಧಿಸಿದಂತೆ ವಿಧಾನ ಸಭೆಯಲ್ಲಿ ಯಡಿಯೂರಪ್ಪ ಮಾಡಿರುವ ಭಾಷಣದ ಕುರಿತು ಆಕ್ಷೇಪಿಸಿದರು.
ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮ್ಯಾನ್ ಬೂಕರ್ ಪ್ರಶಸ್ತಿ ಕೂದಲೆಳೆಯಲ್ಲಿ ಕೈ ತಪ್ಪಿತು. ಅಮೆರಿಕದ ಹಿರಿಯ ಬರಹಗಾರ್ತಿ ಲಿಡಿಯಾ ಡೇವಿಸ್ ಈ ಪ್ರಶಸ್ತಿಯನ್ನ ...
Click here to post your views ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...