ಬೆಂಗಳೂರು, ಜು24: ರಾಜ್ಯ ಸರಕಾರ ಘೋಷಿಸಿರುವ ರೈತರ ಸಾಲ ಮನ್ನಾ ರೈತರ ಮೂಗಿಗೆ ತುಪ್ಪ ಸವರುವ ಯತ್ನವಾಗಿದ್ದು, ಇದೊಂದು ರಾಜಕೀಯ ಗಿಮಿಕ್ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ೨೫ ಸಾವಿರ ರೂ. ವರೆಗೆ ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ರೈತರ ಸಾಲವನ್ನು ಮಾತ್ರ ಮನ್ನಾ ಮಾಡುತ್ತಿರುವುದು ಕಣ್ಣೊರೆಸುವ ತಂತ್ರವಾಗಿದೆ. ಈಗಾಗಲೇ ಬಹಳಷ್ಟು ಮಂದಿ ರೈತರು ಸಾಲ ತೀರಿಸಿ ಆಗಿದೆ ಎಂದರು. ಶೇ.೭೦ರಷ್ಟು ಮಂದಿಗೆ ಸಹಕಾರಿ ಬ್ಯಾಂಕುಗಳಲ್ಲಿ ಕೃಷಿಗೆ ಸಾಲ ನೀಡಿಲ್ಲ. ಜೊತೆಗೆ ಹಲವಾರು ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ೨-೩ ಲಕ್ಷ ರೂ. ಸಾಲ ಪಡೆದಿದ್ದಾರೆ. ಈ ಬಾರಿ ಕೇವಲ ೨೫ ಸಾವಿರ ರೂ. ಪಡೆದ ರೈತರಿಗೆ ಮಾತ್ರ ಬರಗಾಲ ಬಂದಿಲ್ಲ. ಎಲ್ಲರಿಗೂ ಬರ ಬಂದಿದೆ. ಈ ಹಿನ್ನೆಲೆಯಲ್ಲಿ ಕೇವಲ ೨೫ ಸಾವಿರ ರೂ.ಪಡೆದ ರೈತರ ಸಾಲ ಮನ್ನಾ ಮಾಡುತ್ತಿರುವುದು ಸರಕಾರದ ಕಣ್ಣೊರೆಸುವ ತಂತ್ರ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಈ ಬಾರಿ ಕೃಷಿಗೆ ಬ್ಯಾಂಕು ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಸಾಲವೇ ನೀಡಿಲ್ಲ ಎಂದ ಅವರು, ಸರಕಾರಕ್ಕೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಎಲ್ಲ ಕೃಷಿ ಸಾಲ ಪಡೆದ ರೈತರ ಸಾಲಮನ್ನಾ ಮಾಡಿ. ಅದು ಬಿಟ್ಟು ಕೇವಲ ೨೫ ಸಾವಿರ ರೂ ಸಾಲ ಮನ್ನಾ ಮಾಡುವುದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗಲ್ಲ ಎಂದರು.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹದಿನಾಲ್ಕು ವರ್ಷದ ಹುಡುಗಿ ಮತ್ತು ಮೂರು ವರ್ಷದ ಹುಡುಗ ಹಸಿವಿನಿಂದಾಗಿ ಬರ್ಬರ ಸಾವನ್ನಪ್ಪಿದ್ದಾರೆ. ನಾಝ್ರಾ ಖಾತೂನ್ ಎನ್ನ ...
Click here to post your views ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...
ಮಾನ್ಯರೆ,
ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...