ಮೊಳಕೆಯಿಂದ ಹೊರ ಹೊಮ್ಮುತ್ತಿದೆ ಪುಟಾಣಿ ವಿಜ್ಞಾನಿಗಳ ಪ್ರತಿಭೆ
mail-img print-img

ಮೊಳಕೆಯಿಂದ ಹೊರ ಹೊಮ್ಮುತ್ತಿದೆ ಪುಟಾಣಿ ವಿಜ್ಞಾನಿಗಳ ಪ್ರತಿಭೆ

- -ಅಝೀಝ್ ಕಿರುಗುಂದ
ಮಂಗಳವಾರ - ಜುಲೈ -24-2012

ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ವಿಜಯಪುರ ಬಡಾವಣೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಪುಟಾಣಿ ವಿಜ್ಞಾನಿಗಳಿಗೊಂದು ತಮ್ಮ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಪ್ರಾತ್ಯಕ್ಷಿಕೆಗಳು ಗಮನ ಸೆಳೆಯುತ್ತಿವೆ. ಎಳೆಯ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಒಂದು ವಾರದ ಮಟ್ಟಿಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಕ್ಕಳ ಪ್ರತಿಭೆ ಕಂಡು ಸಾರ್ವಜನಿಕರು ನಿಬ್ಬೆರಗಾಗಿದ್ದಾರೆ.ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ಒಕ್ಕಲಿಗರ ಸಮುದಾಯ ಭವನದ ಸಭಾಂಗಣದ ತುಂಬಾ ಮುಂದಿನ ಒಂದು ವಾರಗಳ ಕಾಲ ಮಕ್ಕಳ ಕಲರವ ಕೇಳಿ ಬರಲಿದೆ. ಮಕ್ಕಳು ತಯಾರಿಸಿದ ಪವನ ಶಕ್ತಿ ಬಳಿಸಿ ವಿದ್ಯುತ್ ಉತ್ವಾದನೆ, ರೇಡಿಯೋ ಕಾರ್ಯ ನಿರ್ವಹಿಸುವ ಬಗೆ, ಜೈವಿಕ ಇಂಧನ ಉತ್ಪಾದನೆ ರೀತಿ, ಜಾಗತಿಕ ತಾಪಮಾನ ಏರಿಕೆ ಕಾರಣಗಳು, ಸೌರಶಕ್ತಿ ಬಳಸಿ ನೀರು ಕಾಯಿಸುವ ವಿಧಾನ, ಮಳೆ ನೀರು ಕೊಯ್ಲು, ಹೀಗೆ ಸಾವಿರಾರು ವಿಜ್ಞಾನದ ಪ್ರಾತ್ಯಕ್ಷಿಕೆಗಳು ಹಾಗೂ ಅವುಗಳ ಬಗ್ಗೆ ವಿವರಣೆ ನೀಡುತ್ತಿರುವ ಪುಟಾಣಿ ವಿಜ್ಞಾನಿಗಳು ಸಾರ್ವಜನಿಕರನ್ನು ಹೊಸದೊಂದು ವಿಜ್ಞಾನದ ಲೋಕಕ್ಕೆ ಕರೆದೊಯ್ದಿದ್ದು ನೋಡುಗರನ್ನು ವಿಸ್ಮಯ ಮೂಡಿಸುತ್ತದೆ.

ದಿಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಇಲಾಖೆ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳು ಸ್ವತಃ ತಾವೇ ತಯಾರಿಸಿದ ಪ್ರಾತ್ಯಕ್ಷಿಕೆ ಮೂಲಕ ತಮ್ಮ ಪ್ರತಿಭೆ ಸಾಕ್ಷಾತ್ಕಾರಗೊಳಿಸಿ ಸಾರ್ವಜನಿಕರನ್ನು ದಿಗ್ಮೂಡಗೊಳಿಸುತ್ತಿದ್ದಾರೆ. ಮಕ್ಕಳ ಪ್ರತಿಭೆ ವಿಜ್ಞಾನದ ಬಗ್ಗೆ ಇರುವ ಆಸಕ್ತಿ ಕಂಡು ಸಾರ್ವಜನಿಕರು ಮುಕ್ತ ಕಂಠಗಳಿಂದ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.

ಮಕ್ಕಳ ಪ್ರತಿಭೆಯನ್ನು ಹೊರ ತರುವ ಇಂಥಹ ಕಾರ್ಯಕ್ರಮಗಳು ಪ್ರಭಾವಶಾಲಿ ರೀತಿಯಲ್ಲಿ ಇನ್ನಷ್ಟು ಹೆಚ್ಚಾಗಿ ನಡೆಯಲಿ ಎನ್ನುವುದು ವಿದ್ಯಾರ್ಥಿ ಪೋಷಕರ ಅಭಿಮತವಾಗಿದೆ.ಶಾಲಾ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವ ಸಲುವಾಗಿ ಶಿಕ್ಷಣ ಇಲಾಖೆ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಈ ಕಾರ್ಯಕ್ರಮ ಆಯೋಜಿಸಿದೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಈ ಪ್ರದರ್ಶನದಲ್ಲಿ ಆಯ್ಕೆಯಾದ ಅತ್ಯುತ್ತಮ ಶೇ.5 ಪ್ರಾತ್ಯಾಕ್ಷಿಕೆಗಳು ರಾಜ್ಯ ಮಟ್ಟದ ಪ್ರದರ್ಶನಕ್ಕೆ ಆಯ್ಕೆಗೊಳ್ಳಲಿವೆ. ಅಲ್ಲಿ ಆಯ್ಕೆಯಾದವರು ರಾಷ್ಟ್ರ ಮಟ್ಟದಲ್ಲಿ ತಮ್ಮ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸುವ ಪ್ರಯತ್ನ ನಡೆಸಲಿದ್ದಾರೆ.

ಜಿಲ್ಲಾ ಮಟ್ಟದ ಈ ಪ್ರದರ್ಶನ ಒಟ್ಟು 6 ದಿನಗಳ ಕಾಲ ವೈಭವದಿಂದ ನಡೆಯಲಿದೆ. ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕಡೂರು, ತರೀಕೆರೆ ಮತ್ತು ಕೊಪ್ಪತಾಲ್ಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿವಿಧ ತಾಲೂಕುಗಳಿಂದ ಬರುವ ಸರಕಾರಿ ಶಾಲೆಗಳ ಸರಿ ಸುಮಾರು ಒಂದು ಸಾವಿರಕ್ಕಿಂತ ಅಧಿಕ ವಿದ್ಯಾರ್ಥಿಗಳು ತಮ್ಮ ಪ್ರಾತ್ಯಕ್ಷಿಗಳನ್ನು ಪ್ರದರ್ಶಿಸಲಿದ್ದಾರೆ. ಚಿಕ್ಕ ಪುಟ್ಟ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡ ಈ ಕಾರ್ಯಕ್ರಮ ನಿಜಕ್ಕೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಬಾಲ ವಿಜ್ಞಾನಿಗಳು ಪ್ರಾತ್ಯಾಕ್ಷಿಕೆಗಳ ಮೂಲಕ ವಿಜ್ಞಾನದ ಕೌತುಕ, ರಹಸ್ಯಗಳನ್ನು ಸಾರ್ವಜನಿಕರ ಎದುರು ತೆರೆದಿಡುವ ಮೂಲಕ ತಮ್ಮ ಪ್ರತಿಭೆ ಅನಾವರಣ ಮಾಡುವ ಸುಯೋಗ ಪಡೆದಿದ್ದಾರೆ. ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಮಕ್ಕಳಿಗೆ ಬಾಲ್ಯದಲ್ಲಿ ಇಂತಹ ಪ್ರೋತ್ಸಾಹ ನೀಡಿದಲ್ಲಿ ಮುಂದೊಂದು ದಿನ ಸರಕಾರಿ ಶಾಲೆಗಳ ಬಡ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಹೆಚ್ಚಿನ ಸಾಧನೆ ಮಾಡುವುದರಲ್ಲಿ ಸಂಶಯವಿಲ್ಲ. ಆ ಕಾಲ ಆದಷ್ಟು ಶೀಘ್ರದಲ್ಲಿ ಕೂಡಿ ಬರುವಂತಾಗಲಿ ಅಲ್ಲವೇ?
*


Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...


ನಿಮ್ಮ ಅನಿಸಿಕೆ

postClick here to post your views
EPAPER
access

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್

ರಾಜಕೀಯ ಪಕ್ಷಗಳ ಆತ್ಮವಿಮರ್ಶೆ ಅಗತ್ಯ

ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...


- ನಾ ದಿವಾಕರ್