ಬಾಬಾ ರಾಮ್‌ದೇವ್ ಎಂಬ ಯೋಗ ಗುರು ವಿದೇಶಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪುಹಣ ವಾಪಸ್ ತರುವ ಬಗ್ಗೆ, ಲೋಕಪಾಲ್ ವಿಧೇಯಕ ತರುವ ಬಗ್ಗೆ, ಸಿಬಿಐ ಅನ್ನು ಕೇಂದ್ರ ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಇಟ್ಟುಕೊಂಡು ಹಮ್ಮಿಕೊಂಡ ಉಪವಾಸ ಸತ್ಯಾಗ್ರಹ ಮುಗಿದಿದೆ. ಸರಕಾರ ಅವರ ಯಾವ ಬೇಡಿಕೆಗಳ
ಬಗ್ಗೆಯೂ ಸ್ಪಂದಿಸಿಲ್ಲ. ಆರಂಭದಲ್ಲಿ ತಮ್ಮದು ರಾಜಕೀಯ ರಹಿತ ಹೋರಾಟ ಎಂದು ಹೇಳಿಕೊಳ್ಳುತ್ತಿದ್ದ ಬಾಬಾ ಅವರು ಉಪವಾಸದ ಮೂರನೆಯ ದಿನ ಎನ್‌ಡಿಎ ಮೈತ್ರಿಕೂಟದ ಪಕ್ಷಗಳನ್ನು ತಮ್ಮ ಜೊತೆ ಸೇರಿಸಿಕೊಂಡು ತಮ್ಮದು ರಾಜಕೀಯ ಹೋರಾಟ ಎಂಬುದನ್ನು ಸಾಬೀತುಪಡಿಸಿದರು. ಒಂದೇ ಸಮನೆ ಕಾಂಗ್ರೆಸ್ ಪಕ್ಷದ ವಿರುದ್ಧ ಚಾಟಿ ಬೀಸುತ್ತಿರುವ ಬಾಬಾ ರಾಮ್‌ದೇವ್‌ರ ಹಿಂದೆ ಯಾರೆಲ್ಲ ಇದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಈ ರೀತಿ ರಾಜಕೀಯ ಹೋರಾಟಗಳಿಗೆ ಸತ್ಯಾಗ್ರಹವನ್ನು ಬಳಸಿಕೊಳ್ಳಬೇಕಾದ ಅಗತ್ಯವಿರಲಿಲ್ಲ. ನೇರವಾಗಿಯೇ ಎನ್‌ಡಿಎ ಮೈತ್ರಿಕೂಟದ ಮುಖ್ಯ ಘಟಕವಾದ ಬಿಜೆಪಿ ಪಕ್ಷಕ್ಕೆ ಸೇರಿ ರಾಮ್‌ದೇವ್ ತನ್ನ ಹೋರಾಟವನ್ನು ಕೈಗೊಳ್ಳುವುದು ಉತ್ತಮ.
ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಕಾಂಗ್ರೆಸ್ ಪಕ್ಷದಂತೆಯೇ ದುರುಪಯೋಗಪಡಿಸಿಕೊಂಡ ಬಿಜೆಪಿ ಆಗ ಸಿಬಿಐ ಅನ್ನು ಸರಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಪ್ರಯತ್ನಿಸಲಿಲ್ಲ. ರಾಜ್ಯಪಾಲರ ಹುದ್ದೆಯನ್ನು ಕಾಂಗ್ರೆಸ್ ದುರುಪಯೋಗಪಡಿಸಿಕೊಳ್ಳುತ್ತದೆ ಎಂದು ಹೇಳುವ ಬಿಜೆಪಿ ತಾನು ಅಧಿಕಾರದಲ್ಲಿದ್ದಾಗ ರಾಜ್ಯಪಾಲರ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದೆ. ಬಿಜೆಪಿ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಬಿಜೆಪಿಯ ಸರಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿರುವಾಗಲೂ ಅದನ್ನು ನಿಯಂತ್ರಿಸಲು ಸಾಧ್ಯವಾಗದ ಬಿಜೆಪಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಲೋಕಪಾಲ್ ವಿಧೇಯಕ ತರುತ್ತದೆ ಎಂದು ಜನ ನಂಬುವ ಸಾಧ್ಯತೆ ಇದೆ ಎನಿಸುವುದಿಲ್ಲ. ಕರ್ನಾಟಕದಲ್ಲಿ ಕಳೆದ ಒಂದು ವರ್ಷದಿಂದ ಲೋಕಾಯುಕ್ತ ಹುದ್ದೆ ಖಾಲಿಯಾಗಿದ್ದರೂ ಅದನ್ನು ತುಂಬದೆ ಖಾಲಿ ಬಿಟ್ಟಿರುವ ಬಿಜೆಪಿ ಸರಕಾರಕ್ಕೆ ಭ್ರಷ್ಟಾಚಾರ ನಿಯಂತ್ರಿಸುವ ಇಚ್ಛಾಶಕ್ತಿ ಇಲ್ಲ ಎಂದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.
ಗಣಿ ಅಕ್ರಮಗಳ ಬಗ್ಗೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ನೀಡಿದ ವರದಿಯ ಬಗ್ಗೆ ಯಾವ ಕ್ರಮವನ್ನೂ ಕರ್ನಾಟಕದ ಸರಕಾರ ತೆಗೆದುಕೊಳ್ಳದೆ ಭ್ರಷ್ಟರಿಗೆ ರಕ್ಷಣೆ ಒದಗಿಸಿದೆ. ಅದೇ ರೀತಿ ಅಕ್ರಮ ಸರಕಾರಿ ಭೂಮಿ ಒತ್ತುವರಿ ಕುರಿತು ರಾಮಸ್ವಾಮಿ ಕಮಿಟಿ ನೀಡಿದ ವರದಿಯ ಬಗ್ಗೆಯೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ರೆಡ್ಡಿ ಸಹೋದರರ ಅಕ್ರಮ ಗಣಿಗಾರಿಕೆಯನ್ನು ಕಂಡೂ ಕಾಣದಂತೆ ವರ್ತಿಸಿ ಬಿಜೆಪಿ ಹೈಕಮಾಂಡ್ ಪ್ರೋತ್ಸಾಹಿಸಿತು. ಇಂಥ ಹಿನ್ನೆಲೆ ಇರುವ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಲೋಕಪಾಲ್ ವಿಧೇಯಕ ತರುತ್ತದೆ ಎಂದು ಯಾರಾದರೂ ನಂಬಿದರೆ ಅದು ಅವರ ಮುಗ್ಧತೆಯನ್ನು ತೋರಿಸುತ್ತದೆ ಅಷ್ಟೇ.
ದೇಶದ ಮಠ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಇರುವ ಕಪ್ಪುಹಣದ ಕುರಿತು ಬಾಬಾ ರಾಮ್‌ದೇವ್ ಚಕಾರ ಎತ್ತುವುದಿಲ್ಲ. ಸ್ವತ: ರಾಮದೇವ್ ಮೇಲೆ ತೆರಿಗೆ ವಂಚನೆ ಇತ್ಯಾದಿ ಆರೋಪಗಳೂ ಇವೆ. ಹೀಗಾಗಿ ರಾಜಕೀಯ ಉದ್ದೇಶದ ಬಾಬಾ ರಾಮ್‌ದೇವ್‌ರ ಹೋರಾಟದಿಂದ ದೇಶದಲ್ಲಿ ದೊಡ್ಡ ಸಂಚಲನೆ ಉಂಟಾಗಲಿಲ್ಲ. ಧಾರ್ಮಿಕ ಮುಖವಾಡ ಇರುವ ಕಾರಣ ಅವರ ಅನುಯಾಯಿಗಳು ಮತ್ತು ಸಂಘ ಪರಿವಾರದ ಸಂಘಟನೆಗಳ ಕೆಲವರು ಇಂಥ ಹೋರಾಟದಲ್ಲಿ ಭಾಗವಹಿಸಿದ್ದಾರೆಯೇ ವಿನಃ ದೇಶದ ಎಲ್ಲ ವರ್ಗಗಳ ಜನತೆ ಇದರಲ್ಲಿ ಪಾಲುಗೊಂಡಿಲ್ಲ. ಬಿಜೆಪಿಯಂಥ ಭ್ರಷ್ಟ ಹಾಗೂ ಕೋಮುವಾದಿ ಪಕ್ಷಕ್ಕೆ ಅಧಿಕಾರಕ್ಕೇರಲು ನೆರವಾಗುವ ನಿಟ್ಟಿನಲ್ಲಿ ಹೋರಾಟದ ವೇಷ ತೊಟ್ಟ ರಾಮ್‌ದೇವ್‌ರ ಹೋರಾಟ ಯಶಸ್ವಿಯಾಗುವ ಸಾಧ್ಯತೆ ಇಲ್ಲ. ಇಂಥ ಹೋರಾಟಗಳ ಹಿಂದಿನ ಉದ್ದೇಶ ಬಿಜೆಪಿಯು ಅಧಿಕಾರದಲ್ಲಿರುವಾಗ ವರ್ತಿಸಿದ ರೀತಿ ಮತ್ತು ಅದು ಈಗ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳನ್ನು ನೋಡಿದರೆ ಎಂಥವರಿಗೂ ಅರ್ಥವಾಗುತ್ತದೆ.
ಬಾಬಾ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಮುಲಾಯಂ ಸಿಂಗ್, ಮಾಯಾವತಿ, ಚಂದ್ರಬಾಬು ನಾಯ್ಡು ಮೊದಲಾದವರ ಮೇಲೆ ಭ್ರಷ್ಟಾಚಾರದ ಆರೋಪಗಳು ಇವೆ. ಹೀಗಾಗಿ ಇವರು ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರೂ ಇದನ್ನು ಜನ ಗಂಭೀರವಾಗಿ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ. ಇದು ಅಧಿಕಾರಕ್ಕೆ ಏರಲು ನಡೆಸುವ ಸಾಮಾನ್ಯ ಕಸರತ್ತು ಹೊರತು ಮತ್ತೇನೂ ಅಲ್ಲ ಎಂಬುದನ್ನು ತಿಳಿಯಲು ಹೆಚ್ಚಿನ ಪಾಂಡಿತ್ಯ ಬೇಕಾಗಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಇವೆರಡೂ ಒಂದೇ ನಾಣ್ಯದ ಎರಡು ಮುಖಗಳು. ಇವುಗಳ ನಡುವೆ ಹೆಚ್ಚಿನ ವ್ಯತ್ಯಾಸ ಇಲ್ಲ. ಇವೆರಡರಲ್ಲಿ ಬಿಜೆಪಿ ಹೆಚ್ಚು ಕೋಮುವಾದಿ ಹಾಗೂ ಧಾರ್ಮಿಕ ಮೂಲಭೂತವಾದಿ ಎಂಬುದಷ್ಟೇ ವ್ಯತ್ಯಾಸ. ಭ್ರಷ್ಟಾಚಾರದಲ್ಲಿಯೂ ಬಿಜೆಪಿಯೇ ಮುಂದೆ ಎಂಬುದು ಕರ್ನಾಟದ ಪರಿಸ್ಥಿತಿಯನ್ನು ನೋಡಿದರೆ ಎಂಥ ಮೂರ್ಖನಿಗೂ ಗೊತ್ತಾಗುತ್ತದೆ.
ಏಕೆಂದರೆ ಕಾಂಗ್ರೆಸ್ಸಿನ ಪ್ರಥಮ ಸರಕಾರವು ಇಷ್ಟು ಭ್ರಷ್ಟವಾಗಿರಲಿಲ್ಲ. ಬಿಜೆಪಿಯು ಕರ್ನಾಟಕದ ತನ್ನ ಪ್ರಥಮ ಸರಕಾರದಲ್ಲಿಯೇ ಕರ್ನಾಟಕದ ಇತಿಹಾಸದಲ್ಲಿಯೇ ಕಂಡು ಕೇಳರಿಯದ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಪರೇಷನ್ ಕಮಲ ಎಂಬ ಹೊಸ ಭ್ರಷ್ಟ ವಿಧಾನವನ್ನು ಪರಿಚಯಿಸಿ ಇಡೀ ವ್ಯವಸ್ಥೆಯನ್ನೇ ಕುಲಗೆಡಿಸಿದೆ. ಇಂಥ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂದರೆ ಅದನ್ನು ತಲೆಯಲ್ಲಿ ಮೆದುಳು ಇರುವ ಯಾರಾದರೂ ನಂಬಲು ಸಾಧ್ಯವೇ? ಶಿಸ್ತು ಹಾಗೂ ದೇಶಪ್ರೇಮಿ ಸಂಘಟನೆ ಎಂದು ಹೇಳಿಕೊಳ್ಳುವ ಆರೆಸ್ಸೆಸ್ ಹಿನ್ನೆಲೆಯಿಂದ ಬಂದಿರುವ ವ್ಯಕ್ತಿಗಳೇ ಇಂಥ ಬ್ರಹ್ಮಾಂಡ ಭ್ರಷ್ಟಾಚಾರ ಮಾಡುತ್ತಿರುವಾಗ ಇಂಥ ಶಿಸ್ತು ಹಾಗೂ ದೇಶಪ್ರೇಮಿ ಸಂಘಟನೆಯ ಹಿನ್ನೆಲೆಯಿಲ್ಲದ ಕಾಂಗ್ರೆಸ್ ಪಕ್ಷದವರು ಮಾಡುವ ಭ್ರಷ್ಟಾಚಾರ ದೊಡ್ಡದು ಎನಿಸುವುದಿಲ್ಲ. ಹೀಗಾಗಿಯೇ ಜನ ಕಾಂಗ್ರೆಸ್ಸಿನ ಭ್ರಷ್ಟತನವನ್ನು ನೋಡಿಯೂ ಕೇಂದ್ರದಲ್ಲಿ ಎರಡನೆಯ ಬಾರಿಗೆ ಅದರ ಮೈತ್ರಿಕೂಟಕ್ಕೆ ಬಹುಮತ ಕೊಟ್ಟಿರುವಂತೆ ಕಾಣುತ್ತದೆ.
ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ಉದ್ದೇಶ, ತಾಳ್ಮೆ, ಇಚ್ಛಾಶಕ್ತಿ ಇಂಥ ಹೋರಾಟಗಳಲ್ಲಿ ಕಾಣುವುದಿಲ್ಲ. ಅಂಥ ಉದ್ದೇಶ ಇದ್ದಿದ್ದರೆ ಬಿಜೆಪಿಯಂಥ ಪಕ್ಷಗಳನ್ನು ಅಥವಾ ಭ್ರಷ್ಟಾಚಾರದ ಆರೋಪ ಇರುವ ಕುಟುಂಬ ಕೇಂದ್ರಿತ ಅಥವಾ ವ್ಯಕ್ತಿಕೇಂದ್ರಿತ ಪಕ್ಷಗಳನ್ನು ತಮ್ಮ ವೇದಿಕೆಗೆ ಸೇರಿಸಿಕೊಳ್ಳುತ್ತಿರಲಿಲ್ಲ. ಇಂಥ ಆಂದೋಲನಗಳಿಂದ ವ್ಯವಸ್ಥೆಯಲ್ಲಿ ಯಾವ ಸುಧಾರಣೆಯೂ ಆಗುವ ಲಕ್ಷಣ ಕಾಣುವುದಿಲ್ಲ. ಪರ್ಯಾಯ ರಾಜಕೀಯ ವ್ಯವಸ್ಥೆಯನ್ನು ರೂಪಿಸುವ ನಾಯಕತ್ವ ಯಾರಲ್ಲಿಯೂ ಇಲ್ಲ. ಹೀಗಾಗಿ ದೇಶವು ಇಂದು ಅನಾಥವಾಗಿರುವಂತೆ ಕಾಣುತ್ತದೆ. ಸ್ವಾತಂತ್ರಪೂರ್ವದಲ್ಲಿ ಗಾಂಧಿ, ನೆಹರೂ, ಪಟೇಲ್, ಸುಭಾಷಚಂದ್ರ ಭೋಸ್, ಭಗತ್ ಸಿಂಗ್ ಮೊದಲಾದ ಪ್ರಗತಿಪರ ನಿಲುವಿನ ನಾಯಕರಿದ್ದರು. ಇಂದು ದೇಶವ್ಯಾಪಿ ಪ್ರಭಾವ ಬೀರಬಲ್ಲ ಪ್ರಗತಿಪರ ನಾಯಕರೇ ದೇಶದಲ್ಲಿ ಕಾಣಿಸುತ್ತಿಲ್ಲ. ಹೀಗಾಗಿ ಪ್ರತಿಗಾಮಿ ಮೂಲಭೂತವಾದಿಗಳೇ ಮಹಾನ್ ನಾಯಕರಂತೆ ಫೋಸು ಕೊಡುತ್ತಿದ್ದಾರೆ.
ದೇಶದ ಮಠ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಇರುವ ಕಪ್ಪುಹಣದ ಕುರಿತು ಬಾಬಾ ರಾಮ್‌ದೇವ್ ಚಕಾರ ಎತ್ತುವುದಿಲ್ಲ. ಸ್ವತ: ರಾಮದೇವ್ ಮೇಲೆ ತೆರಿಗೆ ವಂಚನೆ ಇತ್ಯಾದಿ ಆರೋಪಗಳೂ ಇವೆ. ಹೀಗಾಗಿ ರಾಜಕೀಯ ಉದ್ದೇಶದ ಬಾಬಾ ರಾಮ್‌ದೇವ್‌ರ ಹೋರಾಟದಿಂದ ದೇಶದಲ್ಲಿ ದೊಡ್ಡ ಸಂಚಲನೆ ಉಂಟಾಗಲಿಲ್ಲ. ಧಾರ್ಮಿಕ ಮುಖವಾಡ ಇರುವ ಕಾರಣ ಅವರ ಅನುಯಾಯಿಗಳು ಮತ್ತು ಸಂಘ ಪರಿವಾರದ ಸಂಘಟನೆಗಳ ಕೆಲವರು ಇಂಥ ಹೋರಾಟದಲ್ಲಿ ಭಾಗವಹಿಸಿದ್ದಾರೆಯೇ ವಿನಃ ದೇಶದ ಎಲ್ಲ ವರ್ಗಗಳ ಜನತೆ ಇದರಲ್ಲಿ ಪಾಲುಗೊಂಡಿಲ್ಲ. ಬಿಜೆಪಿಯಂಥ ಭ್ರಷ್ಟ ಹಾಗೂ ಕೋಮುವಾದಿ ಪಕ್ಷಕ್ಕೆ ಅಧಿಕಾರಕ್ಕೇರಲು ನೆರವಾಗುವ ನಿಟ್ಟಿನಲ್ಲಿ ಹೋರಾಟದ ವೇಷ ತೊಟ್ಟ ರಾಮ್‌ದೇವ್‌ರ ಹೋರಾಟ ಯಶಸ್ವಿಯಾಗುವ ಸಾಧ್ಯತೆ ಇಲ್ಲ.
ರಾಜ್ಯಾದ್ಯಂತ ಮಳೆ ಚುರುಕುಗೊಳ್ಳುತ್ತಿದೆ. ಈ ಸಾಲಿನಲ್ಲಿ ಮಳೆ ನಿರೀಕ್ಷೆಯಷ್ಟು ಬರದೆ ಇದ್ದರೂ, ಮುಂದಿನ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ರಾಜ್ಯಾದ್ಯ ...
Click here to post your views ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...