
ಹೊಸದಿಲ್ಲಿ, ಜು. 9: ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪ್ರತಿಪಾದಿಸುವ ಶಿಕ್ಷಣದ ಹಕ್ಕು ಕಾಯ್ದೆಯು ಜಾರಿಗೊಂಡು ಎರಡು ವರ್ಷಗಳು ಕಳೆದಿದ್ದರೂ, ಈ ಕಾಯ್ದೆಯ ನಿಯಮದನ್ವಯ ಶೇ. 95ಕ್ಕೂ ಅಧಿಕ ಶಾಲೆಗಳು ಕಾರ್ಯ ನಿರ್ವಹಿಸಿಲ್ಲ ಎಂದು ಸಮೀಕ್ಷೆಯೊಂದು ತಿಳಿಸಿದೆ. ದೇಶಾದ್ಯಂತ ಆರ್‌ಟಿಇ ವೇದಿಕೆಯು ಪಡೆದಿರುವ ಅಂಕಿ ಅಂಶಗಳ ಪ್ರಕಾರ, ಶೇ. 95ಕ್ಕೂ ಅಧಿಕ ಶಾಲೆಗಳು ಕಾಯ್ದೆಯ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ಈ ಕುರಿತು ಸಮೀಕ್ಷೆ ನಡೆಸಿರುವ ಎನ್‌ಜಿಒ ಒಂದು ಹೇಳಿದೆ. ಶಿಕ್ಷಕರಿಗೆ ತರಬೇತಿಯ ಕೊರತೆಯಿರುವುದು ಶಿಕ್ಷಣದ ಗುಣಮಟ್ಟದ ಕುಸಿತಕ್ಕೆ ಕಾರಣವಾಗಿದೆ ಎಂಬ ಅಂಶವನ್ನೂ ಅದು ಪತ್ತೆ ಹಚ್ಚಿದೆ. ದೇಶಾದ್ಯಂತ ಮಂಜೂರಾಗಿರುವ ಶಿಕ್ಷಕರ ಹುದ್ದೆಗಳಲ್ಲಿ ಶೇ. 36ರಷ್ಟು ಹುದ್ದೆಗಳು ಖಾಲಿಯಿವೆ. ಅವುಗಳಲ್ಲಿ ರಾಷ್ಟ್ರ ರಾಜಧಾನಿಯೊಂದರಲ್ಲೇ ಸುಮಾರು 21,000 ಶಿಕ್ಷಕ ಹುದ್ದೆಗಳು ಖಾಲಿಯಿವೆ ಎಂದು ವೇದಿಕೆಯು ಹೇಳಿದೆ. ಕಡ್ಡಾಯ ಶಿಕ್ಷಣ ಹಕ್ಕಿನ ಪ್ರಕಾರ, ಶಿಕ್ಷಕರ ಕೊರತೆಯು ಮಂಜೂರಾದ ಹುದ್ದೆಯ ಶೇ. 10ನ್ನು ಮೀರುವಂತಿಲ್ಲ.
ಆದರೆ ಪ್ರಸ್ತುತ ಶೇ. 36ರಷ್ಟು ಶಿಕ್ಷಕ ಹುದ್ದೆಗಳು ಖಾಲಿಯಿರುವುದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಕ್ಕೆ ಕಾರಣವಾಗಿದೆ ಎಂದು ಸಂಸ್ಥೆಯು ಹೇಳಿದೆ.ರಾಷ್ಟ್ರೀಯ ಸರಾಸರಿಯ ಅಂಕಿ ಅಂಶಗಳನ್ನು ಕಂಡಾಗ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತ ಆತಂಕ ತರುವಂತಿದೆ. ರಾಷ್ಟ್ರೀಯ ಸರಾಸರಿ ಶಿಕ್ಷಕ-ವಿದ್ಯಾರ್ಥಿ ಅನುಪಾತ 1:80 ಇದೆ. ಆದರೆ ಕಾಯ್ದೆಯ ಪ್ರಕಾರ ಇದು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ 1:30 ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಶೇ. 1:35ರಷ್ಟಿರಬೇಕು ಎಂದಿದೆ. ಕಾಯ್ದೆಯ ಜಾರಿಗೆ ಕುರಿತಂತೆ ಜನತೆಗೆ ಜಾಗೃತಿ ಮೂಡಿಸಲು ಸಂಘಟನೆಗಳು ತೊಡಗಿಸಿಕೊಳ್ಳಬೇಕು ಎಂದು ವೇದಿಕೆಯ ಮುಖ್ಯಸ್ಥ ಅಂಬರೀಶ್ ರೈ ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೊದಲ ಯುದ್ಧವನ್ನು ಗೆದ್ದಿದ್ದಾರೆ. ಸರಕಾರ ಸುಸೂತ್ರವಾಗಿ ನಡೆಯ ಬೇಕೆಂದಿದ್ದರೆ ಈ ಯುದ್ಧವನ್ನು ಗೆಲ್ಲಲೇ ಬೇಕಾಗ ...
Click here to post your views ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...
ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...
ಊರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...
ಮಾನ್ಯರೆ,
ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...